Saturday, April 19, 2025
Google search engine

Homeರಾಜ್ಯಸುದ್ದಿಜಾಲಆ.30 ರಂದು ಬೃಹತ್ ಉದ್ಯೋಗ ಮೇಳ : ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಕರೆ

ಆ.30 ರಂದು ಬೃಹತ್ ಉದ್ಯೋಗ ಮೇಳ : ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಕರೆ

20 ಸಾವಿರಕ್ಕೂ ಅಧಿಕ ಉದ್ಯೋಗಾವಕಾಶ ಲಭ್ಯ

ರಾಮನಗರ: ಇದೇ ಆಗಸ್ಟ್ ೩೦ರ ಶುಕ್ರವಾರದಂದು ಚನ್ನಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿರುವ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳದಲ್ಲಿ ಸಾವಿರಾರು ಉದ್ಯೋಗವಕಾಶಗಳು ಲಭ್ಯವಿದ್ದು, ಜಿಲ್ಲೆಯ ಯುವಕ, ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಉದ್ಯೋಗವನ್ನು ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಅವರು ಕರೆ ನೀಡಿದರು.

ಅವರು ಆ. ೨೧ರ ಬುಧವಾರ ನಗರದ ಜಿಲ್ಲಾಧಿಕಾರಿಯವರ ಕೊಠಡಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು. ಹಿಂದೂಸ್ತಾನ್ ಕೋಕೊ ಕೋಲಾ, ಬ್ರೀಟಾನಿಯಾ, ಜೆಬಿಎಚ್, ಟಯೋಟ, ಬಾಸ್ಕೋ, ವಿಸ್ಟ್ರಾನ್, ಇನ್ಪೋಸಿಸ್ ಸಮೂಹ ಸಂಸ್ಥೆಗಳು ಸೇರಿದಂತೆ ೧೨೦ ಕ್ಕೂ ಹೆಚ್ಚು ಪ್ರತಿಷ್ಠಿತ ಖಾಸಗಿ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿದೆ ಎಂದರು. ಇಲ್ಲಿ ೨೦ ಸಾವಿರಕ್ಕೂ ಅಧಿಕ ಉದ್ಯೋಗವಕಾಶ ಲಭ್ಯವಿವೆ. ಅದರಲ್ಲಿ ಅರ್ಹ ಅಭ್ಯರ್ಥಿಗಳಿಗೆ ಉದ್ಯೋಗವಕಾಶ ಕಲ್ಪಿಸುವ ಸುದುದ್ದೇಶ ಹೊಂದಲಾಗಿದೆ. ಆದ ಕಾರಣ ಜಿಲ್ಲೆಯ ಎಸ್.ಎಸ್.ಎಲ್.ಸಿಯಲ್ಲಿ ಉತ್ತೀರ್ಣ ಅಥವಾ ಅನುತ್ತೀರ್ಣರಾದ ಉದ್ಯೋಗಾಕಾಂಕ್ಷಿಗಳು ಯಾವುದೇ ಹಿಂಜರಿಕೆ ಇಲ್ಲದೆ ಇಂಗ್ಲೀಷ್ ಭಾಷೆ ಕಡ್ಡಾಯವಾಗಿ ಬರಲೇ ಬೇಕು ಎನ್ನುವ ಮನೋಭಾವ ಬಿಟ್ಟು ಉದ್ಯೋಗ ಮೇಳದಲ್ಲಿ ಭಾಗವಹಿಸಿದರೆ ಅಗತ್ಯವಿರುವ ಕಂಪನಿಯಿಂದ ಅಂದು ಸಂಜೆಯೊಳಗೆ ನೇಮಕಾತಿ ಪತ್ರವನ್ನು ಪಡೆಯಬಹುದು ಹಾಗೂ ಪಿಯುಸಿ, ಐಟಿಐ, ಡಿಪ್ಲೋಮೊ, ಪದವಿ, ಇಂಜಿನಿಯರಿಂಗ್, ಸ್ನಾತಕೊತ್ತರ ಪದವಿ ಉತ್ತೀರ್ಣ ಅಥವಾ ಅನುತ್ತೀರ್ಣರಾದ ಉದ್ಯೋಗಾಕಾಂಕ್ಷಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು ಎಂದರು.

ಉದ್ಯೋಗ ಮೇಳವು ಆ. ೩೦ರಂದು ಬೆಳಿಗ್ಗೆ ೧೦ ರಿಂದ ಸಂಜೆ ೬ ಗಂಟೆಯವರೆಗೆ ನಡೆಯಲಿದ್ದು, ಸಂಪೂರ್ಣ ಉಚಿತವಾಗಿ ನಡೆಸಲಾಗುತ್ತಿದೆ. ಅಭ್ಯರ್ಥಿಗಳಿಗೆ ಯಾವುದೇ ನೋಂದಣಿ ಶುಲ್ಕ ಇರುವುದಿಲ್ಲ ಹಾಗೂ ಅಭ್ಯರ್ಥಿಗಳು ೧೦ ಪ್ರತಿ ರೆಸ್ಯೂಮ್‌ಗಳನ್ನು ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಸಂದರ್ಶನಕ್ಕೆ ತರಬೇಕಾಗಿದೆ. ಸ್ಥಳೀಯರಿಗೆ ಮೊದಲ ಆದ್ಯತೆ ನೀಡಲಾಗುವುದು. ಅಂತಿಮ ವರ್ಷ ವ್ಯಾಸಂಗ ಮಾಡುತ್ತಿರುವ ಪದವೀದರರು ಈ ಮೇಳದಲ್ಲಿ ಭಾಗವಹಿಸಬಹುದಾಗಿದೆ ಎಂದು ವಿವರಿಸಿದರು. ಈ ಉದ್ಯೋಗ ಮೇಳದಲ್ಲಿ ೫ ಸಾವಿರಕ್ಕೂ ಹೆಚ್ಚು ಮಹಿಳೆಯರಿಗೆ ಉದ್ಯೋಗವಕಾಶವನ್ನು ಕಲ್ಪಿಸಲಾಗುವುದು. ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ಉದ್ಯೋಗಾಕಾಂಕ್ಷಿಗಳು ಅಧಿಕೃತ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ ೧೮೦೦೫೯೯೯೯೧೮ ಕರೆ ಮಾಡಬಹುದು. ಉದ್ಯೋಗ ಮೇಳಕ್ಕೆ ಸಂಬಂಧಿಸಿದಂತೆ https:// skillconnect.kaushalkar.com  ಎಂಬ ಪ್ರತ್ಯೇಕ ಪೋರ್ಟಲ್ ಸೃಷ್ಟಿಸಲಾಗಿದೆ. ಈ ಪೋರ್ಟಲ್‌ನಲ್ಲಿ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಉದ್ಯೋಗ ಮೇಳದ ಟ್ಯಾಬ್ ಅನ್ನು ಆಯ್ಕೆ ಮಾಡಿಕೊಂಡು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಹೇಳಿದರು.

ಉದ್ಯೋಗ ಮೇಳದಲ್ಲಿ ನೇರವಾಗಿ ಉದ್ಯಮಿಗಳಿಂದಲೇ ನೇಮಕಾತಿ ಪ್ರಕ್ರಿಯೆ ನಡೆಯುವುದರಿಂದ ಯಾವುದೇ ಮಧ್ಯವರ್ತಿಗಳಿಗೆ ಅವಕಾಶ ಇರುವುದಿಲ್ಲ. ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ತಿಗಳಿಗೆ/ಉದ್ಯೋಗಾಕಾಂಕ್ಷಿಗಳಿಗೆ ಮತ್ತು ಉದ್ಯೋಗದಾತರಿಗೆ ಉಪಹಾರದ ವ್ಯವಸ್ಥೆಯನ್ನು ಮಾಡಲಾಗಿರುತ್ತದೆ. ಭಾಗವಹಿಸುವ ಅಭ್ಯರ್ಥಿಗಳಿಗೆ ೭೦ ಸೇವಾ ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ ಎಂದರು. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಧಿಕಾರಿ ಪುಷ್ಪಲತಾ ಎಂ.ಸಿ., ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ರಮೇಶ್ ಬಾಬು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular