Saturday, April 19, 2025
Google search engine

Homeರಾಜ್ಯಸುದ್ದಿಜಾಲಬಾಲ್ಯ ವಿವಾಹ ವಿರುದ್ದ ಪ್ರಕರಣ ದಾಖಲಿಸಿ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ

ಬಾಲ್ಯ ವಿವಾಹ ವಿರುದ್ದ ಪ್ರಕರಣ ದಾಖಲಿಸಿ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ

ಶಿವಮೊಗ್ಗ: ಜಿಲ್ಲೆಯಲ್ಲಿ ಬಾಲ್ಯ ವಿವಾಹಗಳ ಸಂಖ್ಯೆ ಹೆಚ್ಚುತ್ತಿದ್ದು, ಇದರ ವಿರುದ್ದ ಹೆಚ್ಚೆಚ್ಚು ಪ್ರಕರಣಗಳನ್ನು ದಾಖಲಿಸಬೇಕು ಹಾಗೂ ಅರಿವನ್ನು ತೀವ್ರಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ ನೀಡಿದರು.

ಏಪ್ರಿಲ್ ಮಾಹೆಯಿಂದ ಜೂನ್ ವರೆಗೆ ಜಿಲ್ಲೆಯಲ್ಲಿ ೪೩ ಬಾಲ್ಯ ವಿವಾಹ ಪ್ರಕರಣ ದಾಖಲಾಗಿದೆ. ಶಿವಮೊಗ್ಗದಲ್ಲಿ ೧೯ ಮತ್ತು ಭದ್ರಾವತಿ ೧೨ ಸಂಖ್ಯೆಯಲ್ಲಿದ್ದು ಈ ಎರಡು ತಾಲ್ಲೂಕುಗಳಲ್ಲೇ ಹೆಚ್ಚು ಬಾಲ್ಯ ವಿವಾಹ ಪ್ರಕರಣಗಳಿವೆ. ಹೆಚ್ಚಿನ ಪ್ರಕರಣ ದಾಖಲಾಗಿರುವೆಡೆ ಸಮುದಾಯದಲ್ಲಿ ಸೇವೆ ಸಲ್ಲಿಸಿರುವ ಮುಖಂಡರ ಮುಂದಾಳತ್ವದಲ್ಲಿ, ಅವರನ್ನೊಳಗೊಂಡು ಆ ಪ್ರದೇಶದಲ್ಲಿ ಪರಿಣಾಮಕಾರಿ ಅರಿವು ಕಾರ್ಯಕ್ರಮ ಕೈಗೊಳ್ಳಬೇಕು ಹಾಗೂ ಬಾಲ್ಯ ವಿವಾಹ ವಿರುದ್ದ ಪ್ರಕರಣ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಹಾಗೂ ೨೦೨೨-೨೩ ನೇ ಸಾಲಿನಲ್ಲಿ ಒಟ್ಟು ೨೪೭ ಬಾಲ ಗರ್ಭಿಣಿಯರ ಪ್ರಕರಣ ದಾಖಲಾಗಿದ್ದು, ಇದನ್ನು ತಡೆಯಲು ಸಿಡಿಪಿಓ ಗಳು ಶಾಲಾ-ಕಾಲೇಜು, ಹಾಸ್ಟೆಲ್‌ಗಳಲ್ಲಿ ಅರಿವು ಕಾರ್ಯಕ್ರಮ ಮಾಡುವುದರೊಂದಿಗೆ ಪೋಷಕರಿಗೆ ಮತ್ತು ಸಮುದಾಯದಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು.
ಅಂಗನವಾಡಿ ಕಾರ್ಯಕರ್ತೆ/ಸಹಾಯಕಿ ನೇಮಕಾತಿ, ಪದೋನ್ನತಿ ಮತ್ತು ವರ್ಗಾವಣೆಗೆ ಸಂಬಂಧಿಸಿದಂತೆ ವರ್ಗಾವಣೆ ಮತ್ತು ಪದೋನ್ನತಿಯ ಪ್ರಕ್ರಿಯೆಯನ್ನು ಮೊದಲ ಆದ್ಯತೆಯಲ್ಲಿ ಮುಗಿಸಿ ನಂತರ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಬೇಕು.

ಜಿಲ್ಲೆಯಲ್ಲಿ ೧೨೬ ಕಾರ್ಯಕರ್ತೆ ಮತ್ತು ೪೪೮ ಸಹಾಯಕಿಯರ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅಧಿಕಾರಿಗಳು ನೇಮಕಾತಿ ವೇಳೆ ಯಾವುದೇ ರೀತಿಯ ಒತ್ತಡಕ್ಕೆ ಮಣಿಯದೇ, ಪಾರದರ್ಶಕವಾಗಿ ಮತ್ತು ಎಚ್ಚರಿಕೆಯಿಂದ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕೆಂದು ಸೂಚನೆ ನೀಡಿದರು.

ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆಯಡಿ ನ್ಯಾಯಾಲಯಕ್ಕೆ ಸಲ್ಲಿಸುವ ಡಿಐಆರ್‌ಗಳಿಗೆ ನ್ಯಾಯಾಲಯಗಳಿಂದ ಮಧ್ಯಂತರ ಆದೇಶ ಮತ್ತು ಆದೇಶ ನೀಡುವುದು ವಿಳಂಬವಾಗುತ್ತಿದ್ದು ಸಂರಕ್ಷಣಾಧಿಕಾರಿಗಳು, ಪೊಲೀಸ್ ಇಲಾಖೆ ಮತ್ತು ನ್ಯಾಯವಾದಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು. ಮಧ್ಯಂತರ ಆದೇಶದ ನೀಡುವ ಕುರಿತು ನ್ಯಾಯಾಲಯ ಸೂಕ್ತ ಕ್ರಮ ವಹಿಸಬೇಕೆಂದು ಕೋರಿದರು.
೨೦೨೨ ರಿಂದ ೨೦೨೪ ರವರೆಗೆ ಜಿಲ್ಲೆಯಲ್ಲಿ ವರದಕ್ಷಿಣೆ ನಿಷೇಧ ಕಾಯ್ದೆಯಡಿ ೨೪೯ ಪ್ರಕರಣ ದಾಖಲಾಗಿದ್ದು ವಿಚಾರಣೆ, ತನಿಖೆ ಹಂತದಲ್ಲಿ ಪ್ರಕರಣಗಳು ಇವೆ. ಶಿವಮೊಗ್ಗ ಮತ್ತು ಭದ್ರಾವತಿ ತಾಲ್ಲೂಕಿನಲ್ಲೆ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಸಿಡಿಪಿಓ ಇತರೆ ಅಧಿಕಾರಿಗಳ ಸಹಯೋಗದೊಂದಿಗೆ ಅರಿವು ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕು. ಮಹಿಳಾ ಗ್ರಾಮಸಭೆಗಳು, ಸ್ತ್ರೀಶಕ್ತಿ ಗುಂಪುಗಳಲ್ಲಿ ಅರಿವು ಮೂಡಿಸಬೇಕು ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೃಷ್ಣಪ್ಪ ಮಾತನಾಡಿ, ವಿವಿಧ ಕಾರ್ಯಕ್ರಮಗಳ ಪ್ರಗತಿ ಬಗ್ಗೆ ಮಾಹಿತಿ ನೀಡಿ, ಟ್ರಾನ್ಸ್ಜೆಂರ?ಸ್, ಲೈಂಗಿಕ ಕಾರ್ಯಕರ್ತರು, ಹೆಚ್‌ಐವಿ ಪೀಡಿತರಿಗೆ ಗೋಪಿಶೆಟ್ಟಿಕೊಪ್ಪ ಆಶ್ರಯ ಮನೆಗಳನ್ನು ಒದಗಿಸುವಂತೆ ಹಾಗೂ ಮಹಿಳಾ ನಿಲಯದ ದುರಸ್ತಿಗೆ ಅನುದಾನ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು ಬಿಡುಗಡೆಗೆ ಕ್ರಮ ವಹಿಸುವಂತೆ ಕೋರಿದರು.

ಸಭೆಯಲ್ಲಿ ಐಎಎಸ್ ಪ್ರೊಬೇಷನರಿ ಅಧಿಕಾರಿ ದೃಷ್ಟಿ ಜೈಸ್ವಾಲ್, ಹಿರಿಯ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೊಷ್ ಕುಮಾರ್, ಜಿ.ಪಂ ಮುಖ್ಯ ಯೋಜನಾಧಿಕಾರಿ ಗಾಯತ್ರಿ, ಯೋಜನಾ ನಿರ್ದೇಶಕರಾದ ನಂದಿನಿ,ಡಿಹೆಚ್‌ಓ ಡಾ.ನಾಗರಾಜ್, ಡಿಡಿಪಿಯು ಪರಮೇಶ್ವರಪ್ಪ, ನಿರೂಪಣಾಧಿಕಾರಿ ಡಾ.ಸಂತೋಷ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಅಧಿಕಾರಿ ಶಶಿರೇಖಾ, ತಾಲ್ಲೂಕುಗಳ ಸಿಡಿಪಿಓ ಗಳು, ವಿವಿಧ ಕಾರ್ಯಕ್ರಮಗಳ ಅನುಷ್ಟಾನ ಅಧಿಕಾರಿಗಳು, ಸಂಘ ಸಂಸ್ಥೆಗಳ ಮುಖ್ಯಸ್ಥರು ಹಾಜರಿದ್ದರು.

RELATED ARTICLES
- Advertisment -
Google search engine

Most Popular