ಹಾಸನ: ಹಾಸನ ತಾಲೂಕಿನ ಕಾರೆಕೆರೆ ಕೃಷಿ ಮಹಾವಿದ್ಯಾಲಯದ ಅಂತಿಮ ಬಿ. ಎಸ್ಸಿ (ಹಾನ್ಸ್) ಕೃಷಿ ವಿದ್ಯಾರ್ಥಿಗಳು ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದ ಅಂಗವಾಗಿ ಹಾಸನ ತಾಲ್ಲೂಕು ದುದ್ದ ಹೋಬಳಿಯ ಕೆ. ಹೊಸಹಳ್ಳಿ ಗ್ರಾಮದಲ್ಲಿ ಉದ್ಘಾಟನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಊರಿನ ಪ್ರಗತಿ ಪರ ರೈತರಾದ ದೀಪಕ್ ಮಾತನಾಡಿ ಸದಾಕಾಲ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಮತ್ತು ಬೆಂಬಲ ಇರುತ್ತದೆ ಎಂದು ತಿಳಿಸಿದರಲ್ಲದೆ, ಕಾರ್ಯಕ್ರಮದಲ್ಲಿ ಊರಿನ ಜನರನ್ನು ಸಹ ಭಾಗಿಮಾಡಿಕೊಳ್ಳಿ ಎಂದು ತಿಳಿಸಿದರು.