Saturday, April 19, 2025
Google search engine

Homeಸ್ಥಳೀಯಅರಮನೆ ನಗರಿಗೆ ಬಂದ ಗಜಪಡೆಗೆ ಜಯ ಮಾರ್ತಾಂಡ ದ್ವಾರದಲ್ಲಿ ಅದ್ದೂರಿ ಸ್ವಾಗತ

ಅರಮನೆ ನಗರಿಗೆ ಬಂದ ಗಜಪಡೆಗೆ ಜಯ ಮಾರ್ತಾಂಡ ದ್ವಾರದಲ್ಲಿ ಅದ್ದೂರಿ ಸ್ವಾಗತ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಗಜಪಡೆಗಳನ್ನು ಅರಮನೆಗೆ ಬರಮಾಡಿಕೊಳ್ಳುವುದರ ಮೂಲಕ ವಿದ್ಯುಕ್ತವಾಗಿ ಸ್ವಾಗತ ಕೋರಲಾಯಿತು.

ಮೈಸೂರು ಜಿಲ್ಲಾಡಳಿತ, ಅರಮನೆ ಮಂಡಳಿ ವತಿಯಿಂದ ಗಜಪಡೆಗೆ ಇಂದು ಏರ್ಪಡಿಸಿದ್ದ ಸ್ವಾಗತ ಕಾರ್ಯಕ್ರಮದಲ್ಲಿ ಬೆಳಿಗ್ಗೆ 10:10 ರಿಂದ 10:30ರ ಶುಭ ಗಳಿಗೆಯಲ್ಲಿ ಅರಮನೆಗೆ ಗಜ ಪಡೆ ಆಗಮನವಾಯಿತು. ಅರಮನೆಯ ಜಯ ಮಾರ್ತಾಂಡ ದ್ವಾರದಲ್ಲಿ ಆನೆಗಳಿಗೆ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಅದ್ದೂರಿಯಾಗಿ ಸ್ವಾಗತಿಸಲಾಯಿತು.

ಈ ಸಂದರ್ಭದಲ್ಲಿ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕ ತನ್ವೀರ್ ಸೇಠ್, ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಕೆ .ಹರೀಶ್ ಗೌಡ, ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀವತ್ಸ , ಜಿಲ್ಲಾಧಿಕಾರಿ ಜಿ. ಲಕ್ಷ್ಮಿಕಾಂತ ರೆಡ್ಡಿ, ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆಎಂ ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಡಾ. ಪಿ ಶಿವರಾಜು, ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿ ಎಂ ಕೆ ಸವಿತಾ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular