Saturday, April 19, 2025
Google search engine

Homeಅಪರಾಧಕಾನೂನುಪೋಕ್ಸೋ ಪ್ರಕರಣ: ಬಿ.ಎಸ್. ಯಡಿಯೂರಪ್ಪ ಅರ್ಜಿ ವಿಚಾರಣೆ ಆ.30ಕ್ಕೆ

ಪೋಕ್ಸೋ ಪ್ರಕರಣ: ಬಿ.ಎಸ್. ಯಡಿಯೂರಪ್ಪ ಅರ್ಜಿ ವಿಚಾರಣೆ ಆ.30ಕ್ಕೆ

ಬೆಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬಂಧಿಸದಂತೆ ಆದೇಶ ನೀಡಲಾಗಿದೆ. ಮತ್ತು ಹೈಕೋರ್ಟ್ , ಆ.೩೦ರವರೆಗೆ ಬಿಎಸ್‌ವೈ ಗೆ ವಿನಾಯಿತಿ ನೀಡಿದೆ.

ಬಿ.ಎಸ್. ಯಡಿಯೂರಪ್ಪ, ಪ್ರಕರಣ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸಬೇಕು ಮತ್ತು ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕು ಎಂಬುವುದಾಗಿ ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಆದೇಶ ಮಾಡಿದೆ.

ಯಡಿಯೂರಪ್ಪ ಪರ ವಕೀಲರು ವಾದ ಮಂಡಿಸಲು ಕಾಲಾವಕಾಶ ನೀಡುವಂತೆ ಮನವಿ ಮಾಡಿದ್ದರು. ಈ ಕಾರಣದಿಂದ ಅರ್ಜಿಗಳ ವಿಚಾರಣೆಯನ್ನು ಆ.೩೦ಕ್ಕೆ ಮುಂದೂಡಿದ ನ್ಯಾಯಪೀಠ, ಅಲ್ಲಿಯವರೆಗೆ ಅರ್ಜಿಗಳ ಸಂಬಂಧ ಹಿಂದೆ ಹೊರಡಿಸಿದ್ದ ಮಧ್ಯಂತರ ಆದೇಶವನ್ನು ವಿಸ್ತರಿಸಿದೆ.

RELATED ARTICLES
- Advertisment -
Google search engine

Most Popular