Saturday, April 19, 2025
Google search engine

Homeಅಪರಾಧಚಿತ್ರದುರ್ಗದಲ್ಲಿ ಡೆಂಗ್ಯೂಗೆ 7 ವರ್ಷದ ಬಾಲಕ ಸಾವು

ಚಿತ್ರದುರ್ಗದಲ್ಲಿ ಡೆಂಗ್ಯೂಗೆ 7 ವರ್ಷದ ಬಾಲಕ ಸಾವು

ಚಿತ್ರದುರ್ಗ: ಜಿಲ್ಲೆಯಲ್ಲಿ ರಾಜ್ಯದಲ್ಲೇ ಡೆಂಗ್ಯೂಗೆ ಮತ್ತೊಂದು ಬಲಿ ಎನ್ನುವಂತೆ ೭ ವರ್ಷದ ಬಾಲಕನೊಬ್ಬ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ಇದೀಗ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಮೇಟಿಕುರ್ಕೆ ಗ್ರಾಮದ ಹನುಮಂತಪ್ಪ ಹಾಗೂ ಕವಿತಾ ಎಂಬುವರ ದಂಪತಿಯ ೭ ವರ್ಷದ ಮಗ ಜಗನ್ನಾಥನಿಗೆ ಜ್ವರ ಕಾಣಿಸಿಕೊಂಡಿತ್ತು. ಆತನನ್ನು ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ಒಂದಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೇ ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನಾಧ್ಯಂತ ದಿನೇ ದಿನೇ ಡೆಂಗ್ಯೂ ಕೇಸ್ ಹೆಚ್ಚಾಗುತ್ತಿವೆ. ಸೊಳ್ಳೆಗಳ ಕಾಟ ಮೇಟಿಕುರ್ಕೆ ಗ್ರಾಮದಲ್ಲಿ ಹೆಚ್ಚಿರುವುದೇ ಡೆಂಗ್ಯೂವಿನಿಂದ ಬಾಲಕನ ಸಾವಿಗೆ ಕಾರಣವೆಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಜೊತೆಗೆ ಸೊಳ್ಳೆಗಳ ನಿಯಂತ್ರಣಕ್ಕೆ ಗ್ರಾಮ ಪಂಚಾಯ್ತಿ, ಆರೋಗ್ಯ ಇಲಾಖೆಯ ಅಧಿಕಾರಿಗಳು ಕ್ರಮವಹಿಸುವಂತೆ ಆಗ್ರಹಿಸಿದ್ದಾರೆ.

RELATED ARTICLES
- Advertisment -
Google search engine

Most Popular