ಬೆಂಗಳೂರು: ಬಿಜೆಪಿ ಸದಸ್ಯತ್ವ ಅಭಿಯಾನ ಸೆಪ್ಟೆಂಬರ್ ೨ರಿಂದ ಆರಂಭವಾಗಿಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿ ವಿಚಾರ ಹೇಳಿದ್ದಾರೆ. ಈ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ ಎಂದೂ ಸುನೀಲ್ ಕುಮಾರ್ ಹೇಳಿದ್ದಾರೆ.
ಸೆಪ್ಟೆಂಬರ್ ೨೫ರ ವರೆಗೂ ಮೊದಲ ಹಂತದಲ್ಲಿ ಮತ್ತು ಸೆಪ್ಟೆಂಬರ್ ೨೫ ರಿಂದ ಅಕ್ಟೋಬರ್ ೨೫ ರವರೆಗೆ ಎರಡನೇ ಹಂತದ ಅಭಿಯಾನ ನಡೆಯಲಿದೆ. ಮಿಸ್ಡ್ ಕಾಲ್ ಮೂಲಕ ಕೂಡ ಸದಸ್ಯತ್ವ ಅಭಿಯಾನ ನಡೆಯಲಿದೆ. ರಾಜ್ಯದಲ್ಲಿ ಕಳೆದ ಬಾರಿ ೧ ಕೋಟಿ ೫ ಲಕ್ಷ ಸದಸ್ಯತ್ವ ಮಾಡಲಾಗಿತ್ತು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹೇಳಿದ್ದಾರೆ.