ಬೆಂಗಳೂರು: ಚನ್ನಪಟ್ಟಣ ತಾಲ್ಲೂಕು ಜೆಡಿಎಸ್ ಪಕ್ಷದ ಭದ್ರಕೋಟೆ, ವರದೇಗೌಡರಂತ ಸಾಮಾನ್ಯ ವ್ಯಕ್ತಿಗೆ ಬೆಂಬಲ ನೀಡಿದ್ದಾರೆ. ಜೆಡಿಎಸ್‌ನ ೬೦ ಸಾವಿರ ಮತಗಳಿವೆ ಎಂದು ಜೆಡಿಎಸ್ ಪಕ್ಷದ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ
.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ಗೆ ಚನ್ನಪಟ್ಟಣದಲ್ಲಿ ನೆಲೆ ಇಲ್ಲ. ಲೋಕಸಭಾ ಚುನಾವಣೆಯಲ್ಲಿ ಸ್ವಲ್ಪ ಮತಗಳು ಬಂದಿರಬಹುದು. ನಾವು ಡೇಟಾ ಇತಿಹಾಸ ನೋಡಿದಾಗ ತಿಳಿಯುತ್ತೆ. ಸಿ.ಪಿ ಯೋಗಿಶ್ವರ್ ಅವರು ಸಹ ವೈಯಕ್ತಿಕ ವರ್ಚಸ್ಸು ಇಟ್ಟುಕೊಂಡಿದ್ದಾರೆ ಎಂದರು.
ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಲೋಕಾಯುಕ್ತಕ್ಕೆ ಪತ್ರ ಬರೆದಿರುವ ಕುರಿತು ಮಾತನಾಡಿದ ಅವರು, ಲೋಕಸಭಾ ಚುನಾವಣೆ ಬಳಿಕ ಕುಮಾರಸ್ವಾಮಿ ಅವರ ನಾಯಕತ್ವದ ಶಕ್ತಿ ಹೆಚ್ಚಾಗಿದೆ. ಹಳೇ ಮೈಸೂರು ಪ್ರಾಂತ್ಯ ಅಲ್ಲದೇ, ಉತ್ತರ ಕರ್ನಾಟಕದಲ್ಲೂ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಒಟ್ಟಾಗಿ ದುಡಿದಿದ್ದಾರೆ. ನಿನ್ನೆ-ಮೊನ್ನೆ ಕಾಂಗ್ರೆಸ್ ನಾಯಕರು ದೆಹಲಿಗೆ ಹೋಗಿದ್ರು. ಅಲ್ಲಿ ಮುಖ್ಯವಾದ ಚರ್ಚೆ ಕುಮಾರಸ್ವಾಮಿ ಅವರನ್ನ ಯಾವ ರೀತಿ ಕಟ್ಟಿ ಹಾಕಬೇಕು ಅಂತ ಚರ್ಚೆ ಆಗಿದೆ ಎಂದು ಹೇಳಿದರು.
ಕುಮಾರಸ್ವಾಮಿ ಅವರು ಗಣಿಗಾರಿಕೆಗೆ ಸಹಿ ಹಾಕಿಲ್ಲ. ಕುಮಾರಸ್ವಾಮಿ ಅವರನ್ನ ಕೇಂದ್ರ ಸಚಿವ ಸ್ಥಾನದಿಂದ ಇಳಿಸೋಕೆ ಆಗಲ್ಲ. ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿರೋದು ಜನರನ್ನ ದಿಕ್ಕು ತಪ್ಪಿಸುವ ಕೆಲಸ ಅಷ್ಟೇ. ಮುಡಾ ಹಗರಣ ಮುಚ್ಚಿಹಾಕಲು ಮಾಡಿರುವ ಉಪಾಯ ಅಷ್ಟೇ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.