Sunday, April 20, 2025
Google search engine

Homeರಾಜ್ಯಕಾರ್ಕಳ ಅತ್ಯಾಚಾರ ಪ್ರಕರಣ: ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಸಚಿವೆ ಲಕ್ಷ್ಮಿ...

ಕಾರ್ಕಳ ಅತ್ಯಾಚಾರ ಪ್ರಕರಣ: ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ಕಾರ್ಕಳದಲ್ಲಿ ನಡೆದ ಯುವತಿಯ ಅಪಹರಣ ಹಾಗೂ ಅತ್ಯಾಚಾರ ಪ್ರಕರಣ ಪೈಶಾಚಿಕ ಕೃತ್ಯವಾಗಿದ್ದು, ಅತ್ಯಂತ ಖಂಡನೀಯ. ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಪೊಲೀಸರೊಂದಿಗೆ ಸತತ ಸಂಪರ್ಕದಲ್ಲಿದ್ದೇನೆ. ಅಲ್ಲದೇ ಸಂತ್ರಸ್ತೆಗೆ ಜಿಲ್ಲಾಡಳಿತ ಎಲ್ಲಾ ರೀತಿಯ ನೆರವು ಒದಗಿಸಲಿದೆ. ಮಾಹಿತಿ ಬಂದ ತಕ್ಷಣ ಘಟನೆಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಲಾಗಿದೆ. ಪೊಲೀಸರಿಗೆ ದಿಟ್ಟತನದ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಪೊಲೀಸರು ಕೂಡ ಘಟನೆ ಸಂಬಂಧಿಸಿದಂತೆ ಕೂಲಂಕಷ ತನಿಖೆ ನಡೆಸುತ್ತಿದ್ದಾರೆ. ಈಗಾಗಲೇ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಇದರ ಹಿಂದೆ ಯಾರೇ ಇದ್ದರೂ ಮುಲಾಜಿಲ್ಲದೇ ಬಂಧಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಲ್ಲ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆ ಸಂಬಂಧ ಯಾರೇ ಆಗಿರಲಿ ತಕ್ಕ ಶಿಕ್ಷೆ ನೀಡುವುದಕ್ಕೆ ನಮ್ಮ ಪೊಲೀಸರಿಗೆ ಹಿಂಜರಿಕೆಯಿಲ್ಲ. ದಿಟ್ಟ ಕ್ರಮ ಕೈಗೊಳ್ಳಲಿದ್ದಾರೆ. ಇನ್ಮುಂದೆ ಜಿಲ್ಲೆಯಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಮುನ್ನಚ್ಚರಿಕೆ ವಹಿಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದೂ ಸಹ ಜಿಲ್ಲಾಡಳಿತಕ್ಕೆ ನಿರ್ದೇಶಿಸಲಾಗಿದೆ ಎಂದಿದ್ದಾರೆ. ಸಂತ್ರಸ್ತ ಯುವತಿಗೆ ಕಾರ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂತ್ರಸ್ತೆಗೆ ಜಿಲ್ಲಾಡಳಿತ ಮಾನಸಿಕ ಧೈರ್ಯ ನೀಡಿದ್ದು, ಎಲ್ಲ ರೀತಿಯ ನೆರವು ನೀಡಲಿದೆ ಎಂದು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular