Sunday, April 20, 2025
Google search engine

Homeರಾಜ್ಯರಾಜ್ಯಕ್ಕೆ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಮಾಡಿಲ್ಲ: ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ

ರಾಜ್ಯಕ್ಕೆ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಮಾಡಿಲ್ಲ: ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ

ತುಮಕೂರು: ಕರ್ನಾಟಕ ಸೇರಿದಂತೆ ಯಾವುದೇ ರಾಜ್ಯಕ್ಕೆ, ಯಾವುದೇ ವಿಷಯದಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಮಾಡಿಲ್ಲ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.

ತುಮಕೂರಿನಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಅವರ ೧೧೩ನೇ ಸಂಚಿಕೆಯ ಮನದ ಮಾತು ಕಾರ್ಯಕ್ರಮವನ್ನು ಆಲಿಸಿ ಮಾತನಾಡಿದ ಅವರು, ಈ ಬಗ್ಗೆ ಕಾಂಗ್ರೆಸ್ ಪಕ್ಷದ ನಾಯಕರ ಆರೋಪದಲ್ಲಿ ಹುರುಳಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಕೇಂದ್ರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಮುಂದಾಗಬೇಕು ಎಂದು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕೀ ಬಾತ್ ಕಾರ್ಯಕ್ರಮ ದೇಶದ ಅಭಿವೃದ್ಧಿ ಸಾಧನವಾಗಿದೆ. ಪ್ರಧಾನಿ ಅವರು, ಶಿಕ್ಷಣ, ಕೃಷಿ, ಕೈಗಾರಿಕೆ, ಆಹಾರ ಪದ್ಧತಿ, ಯೋಗ, ಆರೋಗ್ಯ ಮೊದಲಾದ ವಿಷಯಗಳನ್ನು ಪ್ರಸ್ತುತಪಡಿಸುತ್ತಿದ್ದಾರೆ ಎಂದರು.

RELATED ARTICLES
- Advertisment -
Google search engine

Most Popular