Saturday, April 19, 2025
Google search engine

Homeರಾಜ್ಯಸುದ್ದಿಜಾಲಬೆಂಬಲ ಯೋಜನೆಯಡಿ ಸೂರ್ಯಕಾಂತಿ ಉತ್ಪನ್ನ ಖರೀದಿ

ಬೆಂಬಲ ಯೋಜನೆಯಡಿ ಸೂರ್ಯಕಾಂತಿ ಉತ್ಪನ್ನ ಖರೀದಿ

ಬಳ್ಳಾರಿ: ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಪ್ರಸ್ತಕ ಸಾಲಿನ ಮುಂಗಾರು ಹಂಗಾಮಿನಲ್ಲಿ ಸೂರ್ಯಕಾಂತಿ ಉತ್ಪನ್ನವನ್ನು ಖರೀದಿಸಲಾಗುವುದು ಎಂದು ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಕರ್ನಾಟಕ ಸಹಕಾರಿ ಎಣ್ಣೆ ಬೀಜ ಬೆಳೆಗಾರರ ಮಹಾ ಮಂಡಳಿ ನಿಯಮಿತ ಚಿತ್ರದುರ್ಗ, ಬಳ್ಳಾರಿಯ ವಿಭಾಗೀಯ ಕಚೇರಿ ವತಿಯಿಂದ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಉತ್ಪನ್ನವನ್ನು ಕೇಂದ್ರ ಸರ್ಕಾರ ನಿಗಧಿಪಡಿಸಿದ ಬೆಂಬಲ ಬೆಲೆ ಪ್ರತಿ ಕ್ವಿಂಟಾಲ್‌ಗೆ ರೂ.7,280 ರಂತೆ ರೈತರಿಂದ ಖರೀದಿಸಲಾಗವುದು. ಈಗಾಗಲೇ ಖರೀದಿ ಕೇಂದ್ರಗಳನ್ನು ಜಿಲ್ಲೆಯ ವಿವಿಧ ಸ್ಧಳಗಳಲ್ಲಿ ಪ್ರಾರಂಭಿಸಲಾಗಿದೆ.

ಖರೀದಿ ಕೇಂದ್ರಗಳ ವಿವರ: ಬಳ್ಳಾರಿಯ ಎಪಿಎಂಸಿ ಯಾರ್ಡ್ನ ಎಪಿಎಂಸಿ ಆಡಳಿತ ಕಚೇರಿಯ ನಟರಾಜ ಹೊಸಮನಿ ಅವರ ಮೊ.9686513163 ಮತ್ತು ಶಿವಮೂರ್ತಿ.ಡಿ.ಹೆಚ್ ಅವರ ಮೊ.8722047273. ಬಳ್ಳಾರಿ ತಾಲ್ಲೂಕಿನ ಕಪ್ಪಗಲ್ಲು ಗ್ರಾಮದ ಮಠದ ರಸ್ತೆಯ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ ನಿಯಮಿತದ ಕಾರ್ಯದರ್ಶಿ ಈರೇಶ ಅವರ ಮೊ.7353155205. ಖರೀದಿ ಏಜೆನ್ಸಿಯು ಕೆಒಎಫ್ ಬಳ್ಳಾರಿ ಆಗಿರುತ್ತದೆ.

ಬೇಕಾದ ದಾಖಲೆಗಳು: 2024-25 ನೇ ಸಾಲಿನ ಪಹಣಿ ಪತ್ರ. ರೈತರು ತಮ್ಮ ಹೆಸರನ್ನು ಫ್ರೂಟ್ಸ್ ತಂತ್ರಾಶದಲ್ಲಿ ನೋಂದಾಯಿಸಿರಬೇಕು ಹಾಗೂ ಎಫ್‌ಐಡಿ ಪಡೆಯುವುದು ಕಡ್ಡಾಯ. ರೈತರಲ್ಲಿ ಫ್ರೂಟ್ಸ್ ಐಡಿ ಇಲ್ಲದೇ ಇದ್ದಲ್ಲಿ ಅಥವಾ ಫ್ರೂಟ್ಸ್ನಲ್ಲಿ ಯಾವುದಾದರು ತಾಂತ್ರಿಕ ದೋಷವಿದ್ದಲ್ಲಿ ರೈತರು ಕೃಷಿ ಇಲಾಖೆಯನ್ನು ಸಂಪರ್ಕಿಸಿ ಅವಶ್ಯಕ ಮಾಹಿತಿ ಪಡೆಯಬಹುದು. ಆಧಾರ್ ಕಾರ್ಡ್, ಬ್ಯಾಂಕ್ ಖಾತೆ (ಆಧಾರದ ಕಾರ್ಡ್ನೊಂದಿಗೆ ಜೋಡಣೆಗೊಂಡ) ಪುಸ್ತಕದ ನಕಲು ಪ್ರತಿ. ಒಣಗಿದ ಹಾಗೂ ಸ್ವಚ್ಛ ಎಫ್.ಎ.ಕ್ಯೂ ಗುಣಮಟ್ಟದ ಸೂರ್ಯಕಾಂತಿ ಉತ್ಪನ್ನವನ್ನು ಕೇಂದ್ರಕ್ಕೆ ಮಾರಾಟಕ್ಕೆ ತರುವುದು. ಸೂರ್ಯಕಾಂತಿ ಖರೀದಿ ಕೇಂದ್ರಗಳಲ್ಲಿ ರೈತರು ತಮ್ಮ ಹೆಸರನ್ನು ಆ.24 ರಿಂದ 45 ದಿನಗಳೊಳಗೆ ನೋಂದಣಿ ಮಾಡಿಸಿ, ನೋಂದಣಿ ಚೀಟಿ ಪಡೆಯಬೇಕು.

ನಿಗಧಿತ ಅವಧಿಯೊಳಗೆ ನೋಂದಣಿಗೊಡ ರೈತರಿಂದ ಪ್ರತಿ ಎಕರೆಗೆ 03 (ಮೂರು) ಕ್ವಿಂಟಾಲ್ ಗರಿಷ್ಠ 15 (ಹದಿನೈದು) ಕ್ವಿಂಟಾಲ್ ಮಾತ್ರ ಖರೀದಿಸಲಾಗುವುದು. ಸೂರ್ಯಕಾಂತಿ ಉತ್ಪನ್ನವನ್ನು 90 ದಿನಗಳವರೆಗೆ ಖರೀದಿಸಲಾಗುವುದು. ಬೆಳಿಗ್ಗೆ 09 ಗಂಟೆಯಿದ ಸಾಯಂಕಾಲ 05 ಗಂಟೆಯವರೆಗೆ ಮಾತ್ರ ಖರೀದಿಸಲಾಗುವುದು. ಸರ್ಕಾರಿ ರಜೆ ದಿನಗಳನ್ನು ಹೊರತುಪಡಿಸಿ ಉಳಿದ ದಿನಗಳಲ್ಲಿ ಖರೀದಿಸಲಾಗುವುದು. ನಿಗದಿತ ಸಾಮಾಜಿಕ ಅಂತರ ಮತ್ತು ನೈರ್ಮಲ್ಯ ಕಾಪಾಡುವುದು ಹಾಗೂ ವೈರಾಣು ಹರಡುವಿಕೆ ತಡೆಗಟ್ಟುವ ಬಗ್ಗೆ ಕೇಂದ್ರ/ರಾಜ್ಯ ಸರ್ಕಾರವು ನೀಡಿರುವ ಸೂಚನೆಯನ್ನು ಕಡ್ಡಾಯವಾಗಿ ಪಾಲಿಸಬೇಕು.

ಯಾವುದೇ ಸಂದರ್ಭದಲ್ಲಿ ರೈತರು ಮಧ್ಯವರ್ತಿಗಳ ಮೊರೆ ಹೋಗಬಾರದು. ಜಿಲ್ಲೆಯ ರೈತರು ಬೆಂಬಲ ಬೆಲೆ ಯೋಜನೆಯನ್ನು ಸದುಪಯೋಗಪಡೆದುಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular