ಮಂಡ್ಯ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಕ್ ತನ್ವೀರ್ ಆಸಿಫ್ ಅವರು ಇಂದು ಶ್ರೀರಂಗಪಟ್ಟಣ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶ್ರೀರಂಗಪಟ್ಟಣ ತಾಲ್ಲೂಕಿನ ಕಿರಂಗೂರು ಗ್ರಾಮ ಪಂಚಾಯಿತಿಯ ಸರ್ಕಾರಿ ಹಿರಿಯ ಪ್ರೌಢಶಾಲೆಗೆ ಭೇಟಿ ನೀಡಿ ಅಲ್ಲಿನ ಮಕ್ಕಳೊಡನೆ ಶಾಲೆಯಲ್ಲಿ ನೀಡುತ್ತಿರುವ ಸೌಕರ್ಯಗಳ ಕುರಿತು ಸಂವಹನ ನಡೆಸಿದರು.
ಪ್ರಾಥಮಿಕ ಶಾಲೆಯಲ್ಲಿ ಉಪಾಧ್ಯಾಯರ ಶಾಲೆಯಲ್ಲಿ ನೀಡುತ್ತಿರುವ ಎಲ್ಲ ಸೌಲಭ್ಯಗಳ ಕುರಿತು ಮಾತನಾಡಿದರು ಜೊತೆಗೆ ಗ್ರಾಮ ಪಂಚಾಯಿತಿಯ ಕುಡಿಯುವ ನೀರಿನ ವ್ಯವಸ್ಥೆಯ ಓವರ್ ಹೆಡ್ ಟ್ಯಾಂಕ್ಗಳನ್ನು ಹಾಗೂ ಡಿಜಿಟಲ್ ಗ್ರಂಥಾಲಯವನ್ನು ಪರಿಶೀಲಿಸಿದರು.
ನಂತರ ಶೆಟ್ಟಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಆರೋಗ್ಯ ಯೋಗ ಕ್ಷೇಮ ಕೇಂದ್ರಕ್ಕೆ ಭೇಟಿ ನೀಡಿ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳೊಡನೆ ಸಾರ್ವಜನಿಕರಿಗೆ ನೀಡುತ್ತಿರುವ ಸೌಲಭ್ಯಗಳ ಕುರಿತು ಚರ್ಚಿಸಿ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ರೋಗಿಗಳಿಗೆ ಸಿಗುತ್ತಿರುವ ಸೌಲಭ್ಯಗಳ ಕುರಿತು ಮಾಹಿತಿ ಪಡೆದರು.
ಶೆಟ್ಟಳ್ಳಿ,ಮಹದೇವಪುರ ಚಿಕ್ಕಂಕನಳ್ಳಿ , ಬಳ್ಳೇಕೆರೆ, ಮುಂಡುಗುದೊರೆ ಗ್ರಾಮ ಪಂಚಾಯಿತಿಯ ಹೊಡಿಯಾಂಡಳ್ಳಿ ಗ್ರಾಮದಲ್ಲಿ ಐದಾರು ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಮಾಡುತ್ತಿರುವ ಕುಡಿಯುವ ನೀರಿನ ಬಹು ಗ್ರಾಮ ಯೋಜನೆ ನೀರಿನ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಕೊಡಿಯಾಲ ಗ್ರಾಮ ಪಂಚಾಯಿತಿಯ ಹುಣಸೆನಹಳ್ಳಿ ಗ್ರಾಮದ ನರೇಗಾ ಯೋಜನೆಯ ತಿಮ್ಮೇಗೌಡನ ಕಟ್ಟೆ ಕೆರೆ ಅಭಿವೃದ್ಧಿ ಕಾಮಗಾರಿಯನ್ನು ಪರಿಶೀಲಿಸಿದರು. ಹಾಗೂ ಜೆಜೆಎಂ ಕಾಮಗಾರಿಗಳನ್ನು ಸಹ ಪರಿಶೀಲಿಸಿದರು.
