Saturday, April 19, 2025
Google search engine

Homeರಾಜ್ಯಸುದ್ದಿಜಾಲಎಸ್ ಡಿಪಿಐ ಉಳ್ಳಾಲ ವತಿಯಿಂದ ನಾಳೆ ಕ್ಷೇತ್ರ ಪ್ರತಿನಿಧಿ ಸಭೆ

ಎಸ್ ಡಿಪಿಐ ಉಳ್ಳಾಲ ವತಿಯಿಂದ ನಾಳೆ ಕ್ಷೇತ್ರ ಪ್ರತಿನಿಧಿ ಸಭೆ

ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು (ಉಳ್ಳಾಲ) ವಿಧಾನ ಸಭಾ ಸಮಿತಿಯ ಕ್ಷೇತ್ರ ಪ್ರತಿನಿಧಿ ಸಭೆ (ARC) ನಾಳೆ ಆಗಸ್ಟ್ 30 ಶುಕ್ರವಾರದಂದು ಕಲ್ಲಾಪು ಯುನಿಟಿ ಹಾಲ್ ಸಭಾಂಗಣದಲ್ಲಿ ಮಧ್ಯಾಹ್ನ 2:30 ಕ್ಕೆ ನಡೆಯಲಿದೆ.

ಪ್ರಸಕ್ತ ದೇಶದೆಲ್ಲೆಡೆ SDPI ಪಕ್ಷದ ಆಂತರಿಕ ಚುನಾವಣೆಯು ನಡೆಯುತ್ತಿದ್ದು, ಇದರ ಪ್ರಯುಕ್ತ ಕ್ಷೇತ್ರ ಪ್ರತಿನಿಧಿ ಸಭೆಯನ್ನು ಕಲ್ಲಾಪುವಿನ ಯುನಿಟಿ ಹಾಲ್ ನಲ್ಲಿ ಆಯೋಜಿಸಲಾಗಿದೆ.

ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ಬಶೀರ್ ಎಸ್.ಎಂ.ರವರು ಸಭೆಯ ಅಧ್ಯಕ್ಷತೆಯನ್ನು ವಹಿಸಲಿದ್ದು,
ಈ ಸಭೆಯಲ್ಲಿ ಕ್ಷೇತ್ರ ಸಮಿತಿಯ 2024 – 2027 ರ ಅವಧಿಗೆ ಹೊಸ ನಾಯಕರ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ಪ್ರಸಕ್ತ ಈ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ SDPI ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಇಲ್ಯಾಸ್ ಮುಹಮ್ಮದ್ ತುಂಬೆ ಮತ್ತು ಮುಹಮ್ಮದ್ ಅಶ್ರಫ್ , ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ, ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಮಜೀದ್ ತುಂಬೆ , ರಾಜ್ಯ ಸಮಿತಿ ಸದಸ್ಯರಾಗಿರುವ ನವಾಝ್ ಉಳ್ಳಾಲ, ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು , ಮಂಗಳೂರು ಕ್ಷೇತ್ರ ಉಸ್ತುವಾರಿಯೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಮಾಲ್ ಜೋಕಟ್ಟೆ , ಜಿಲ್ಲಾ ಕೋಶಾಧಿಕಾರಿ ಮೂಸಬ್ಬ ತುಂಬೆ , ಬಂಟ್ವಾಳ ಪುರಸಭೆಯ ನೂತನ ಉಪಾಧ್ಯಕ್ಷರಾದ ಮೂನಿಶ್ ಅಲಿ ಬಂಟ್ವಾಳ, ಜಿಲ್ಲಾ ಸಮಿತಿ ಸದಸ್ಯರಾದ ಯೂಸುಫ್ ಆಲಡ್ಕ , ಅಶ್ರಫ್ ತಲಪಾಡಿ, ನಝೀರ್ ಪುದು , ಕ್ಷೇತ್ರ ಸಮಿತಿಯ ಉಪಾಧ್ಯಕ್ಷರುಗಳಾದ ರವಿ ಕುಟಿನ್ಹಾ , ಫಾರೂಕ್ ಝಲ್ ಝಲ್, ವಿಮೆನ್ ಇಂಡಿಯಾ ಮೂವ್ಮೆಂಟ್ ಮಂಗಳೂರು ಕ್ಷೇತ್ರ ಸಮಿತಿಯ ಅಧ್ಯಕ್ಷೆ ಸಬ್ರೀನಾ ಯು.ಬಿ, ತಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಇಸ್ಮಾಯಿಲ್ ಟಿ., ಸಜಿಪನಡು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಇಕ್ಬಾಲ್ ಎಸ್.ಎನ್. , ಉಪಾಧ್ಯಕ್ಷೆ ಸಬಿತಾ ಡಿಸೋಝಾ , ಪಾವೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಮೆಹರುನ್ನೀಸಾ , ಹಾಗೂ ಕ್ಷೇತ್ರ ಸಮಿತಿಯ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.

ಅಲ್ಲದೇ ಕ್ಷೇತ್ರ ವ್ಯಾಪ್ತಿಯ SDPI ಪಕ್ಷದ ಚುನಾಯಿತ ಜನಪ್ರತಿನಿಧಿಗಳು , ಬ್ಲಾಕ್ ಸಮಿತಿಯ ನಾಯಕರುಗಳು, ವಿಶೇಷ ಆಹ್ವಾನಿತರು ಈ ಸಭೆಗೆ ಆಗಮಿಸಲಿದ್ದಾರೆ ಎಂದು ಎಸ್ಡಿಪಿಐ ಮಂಗಳೂರು ಕ್ಷೇತ್ರ ಸಮಿತಿ ಕಾರ್ಯದರ್ಶಿ ಉಬೈದ್ ಅಮ್ಮೆಂಬಳ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular