Sunday, April 20, 2025
Google search engine

Homeರಾಜ್ಯಸುದ್ದಿಜಾಲಜಿಲ್ಲೆಯಲ್ಲಿ ಎನಿವೇರ್ ನೋಂದಣಿ ವ್ಯವಸ್ಥೆ ಜಾರಿ: ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಜಿಲ್ಲೆಯಲ್ಲಿ ಎನಿವೇರ್ ನೋಂದಣಿ ವ್ಯವಸ್ಥೆ ಜಾರಿ: ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ: ರಾಜ್ಯ ಸರ್ಕಾರದ 2024-25ನೇ ಸಾಲಿನ ಆಯವ್ಯಯ ಭಾಷಣದ ಘೋಷಣೆಯಂತೆ ಜಿಲ್ಲೆಯಲ್ಲಿ ಎನಿವೇರ್ ನೋಂದಣಿ ವ್ಯವಸ್ಥೆ ಜಾರಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

ಬೆಂಗಳೂರು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಎನಿವೇರ್ ನೋಂದಣಿ ವ್ಯವಸ್ಥೆ ಯಶ್ವಸಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಈ ಕಾರಣದಿಂದಾಗಿ ಎನಿವೇರ್ ನೋಂದಣಿಯನ್ನು ಚಿತ್ರದುರ್ಗ ಜಿಲ್ಲೆಯ ಉಪನೋಂದಣಿ ಕಛೇರಿಗಳಿಗೂ ವಿಸ್ತರಿಸಲು ನಿರ್ಧರಿಸಲಾಗಿದೆ. ಪ್ರಸ್ತುತ ಸಾರ್ವಜನಿಕರು ಸ್ಥಿರಾಸ್ತಿ ಇರುವ ವ್ಯಾಪ್ತಿಯ ಉಪನೋಂದಣಿ ಕಛೇರಿಯಲ್ಲಿ ಮಾತ್ರ ದಸ್ತಾವೇಜನ್ನು ನೋಂದಣಿ ಮಾಡಲಾಗುತ್ತಿತ್ತು. ಎನಿವೇರ್ ನೋಂದಣಿಯಲ್ಲಿ ದಸ್ತಾವೇಜನ್ನು ಸ್ಥಿರಾಸ್ತಿ ಇರುವ ಜಿಲ್ಲೆಯ ಯಾವುದಾದರೂ ಉಪನೋಂದಣಿ ಕಛೇರಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ.

ಎನಿವೇರ್ ನೋಂದಣಿ ವ್ಯವಸ್ಥೆಯು ಸಾರ್ವಜನಿಕರಿಗೆ ಹಲವಾರು ರೀತಿಯಲ್ಲಿ ಉಪಯುಕ್ತವಾಗಿದ್ದು, ದಸ್ತಾವೇಜಿನ ನೋಂದಣಿಯಲ್ಲಿ ಪಾರದರ್ಶಕತೆ ಹೆಚ್ಚಿಸುತ್ತದೆ. ವಿಳಂಬವನ್ನು ತಡೆಗಟ್ಟುತ್ತದೆ. ಸಾರ್ವಜನಿಕರು ಸಮೀಪದಲ್ಲಿರುವ ಉಪನೋಂದಣಿ ಕಛೇರಿಯಲ್ಲಿ ದಸ್ತಾವೇಜನನ್ನು ನೋಂದಾಯಿಸಬಹುದು. ಸ್ಲಾಟ್ ಲಭ್ಯವಿರುವಂತಹ ಕಛೇರಿಯನ್ನು ನೋಂದಣಿಗೆ ಆಯ್ಕೆ ಮಾಡಿಕೊಳ್ಳಬಹುದು. ನೋಂದಣಿ ಪ್ರಕ್ರಿಯೆ ಸುಲಭವಾಗುವುದಲ್ಲದೆ ಸಮಯವು ಸಹ ಉಳಿಯುತ್ತದೆ. ಉಪ ನೋಂದಣಿ ಕಛೇರಿಗಳಲ್ಲಿ ಜನದಟ್ಟಣೆ ಕಡಿಮೆಯಾಗುತ್ತದೆ. ಕಛೇರಿ ಸಿಬ್ಬಂದಿಗಳ ಮೇಲೆ ಕೆಲಸದ ಒತ್ತಡ ಕಡಿಮೆಯಾಗುತ್ತದೆ ಹಾಗೂ ಕಛೇರಿಗಳಲ್ಲಿ ನೋಂದಣಿ ಕೆಲಸ ಸಮಾನವಾಗಿ ಹಂಚಿಕೆಯಾಗುತ್ತದೆ. ಸಾರ್ವಜನಿಕರು ಎನಿವೇರ್ ನೋಂದಣಿಯ ಸದುಪಯೋಗಪಡಿಸಿಕೊಂಡು ತಮಗೆ ಹತ್ತಿರದ ಅಥವಾ ನೋಂದಣಿಗೆ ಸ್ಲಾಟ್ ಲಭ್ಯವಿರುವಂತಹ ಕಛೇರಿ ಆಯ್ಕೆ ಮಾಡಿಕೊಂಡು ದಸ್ತಾವೇಜನ್ನು ನೋಂದಾಯಿಸಿಕೊಳ್ಳುವAತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular