ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ತೀವ್ರಗೊಳ್ಳುವ ಸಾಧ್ಯತೆ ಇದ್ದು, ಇಂದು ಆಗಸ್ಟ್ ೩೦ಕ್ಕೆ ರೆಡ್ ಅಲರ್ಟ್ ಘೋಷಿಸಿದ್ದು, ಆಗಸ್ಟ್ ೩೧ರಂದು ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್‌ನ್ನು ಐಎಂಡಿ ಘೋಷಿಸಿದೆ.
ಆಗಸ್ಟ್ ೩೧, ಸೆಪ್ಟೆಂಬರ್ ೧, ಮತ್ತು ೨ ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಗಾಳಿಯ ವೇಗ ಗಂಟೆಗೆ ೩೫ ರಿಂದ ೪೫ ಕಿಮೀ ತಲುಪುವ ಸಾಧ್ಯತೆಯಿರುವುದರಿಂದ ಮೀನುಗಾರರಿಗೆ ಎಚ್ಚರಿಕೆ ವಹಿಸುವಂತೆ IMD ಎಚ್ಚರಿಕೆ ನೀಡಿದೆ. ಉಡುಪಿ ಜಿಲ್ಲೆಯಲ್ಲಿ ಗುರುವಾರ ಉತ್ತಮ ಮಳೆಯಾಗಿದ್ದು, ದಿನವಿಡೀ ಬಿರುಗಾಳಿ ಸಹಿತ ಮಳೆಯಾಗಿದೆ. ಸಂಜೆ ಮತ್ತು ರಾತ್ರಿ ಗುಡುಗು ಸಹಿತ ಮಳೆಯಾಗಿದೆ. ಕಾರ್ಕಳ ಮತ್ತು ಕುಂದಾಪುರದ ವಿವಿಧೆಡೆ ಸಾಧಾರಣ ಮಳೆಯಾಗಿದೆ. ಮಂಗಳೂರಿನಲ್ಲಿ ಗರಿಷ್ಠ ತಾಪಮಾನ ೨೮.೪ ಡಿಗ್ರಿ ಸೆಲ್ಸಿಯಸ್, ಕನಿಷ್ಠ ೨೩ ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.