ವಿರಾಜಪೇಟೆ : ರಾಜ್ಯದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿಯಾಗಿದ್ದು, ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಚನ್ನಯ್ಯಕೋಟೆಯಲ್ಲಿ ವೃದ್ದೆಯೊಬ್ಬರು ಸಾವನ್ನಪ್ಪಿದ್ದಾರೆ.
ಚನ್ನಯ್ಯನಕೋಟೆ ಗ್ರಾಮದ ವೃದ್ಧೆ ಕಾತಾಯಿ (೭೨) ಕಾಡಾನೆ ದಾಲಿಗೆ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ವನ್ಯಜೀವ ಮಂಡಳಿ ಸದಸ್ಯ ಸಂಕೇತ್ ಪೂರ್ವಯ್ಯ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಕಾಡಾನೆ ಹಾವಳಿ ತಡೆಗಟ್ಟದ ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.