Saturday, April 19, 2025
Google search engine

Homeರಾಜ್ಯಆದ್ಯಾ ವಚನಕರ ಶ್ರೀ ದೇವರ ದಾಸಿಮಯ್ಯ ಜಯಂತಿ ಆಚರಣೆ

ಆದ್ಯಾ ವಚನಕರ ಶ್ರೀ ದೇವರ ದಾಸಿಮಯ್ಯ ಜಯಂತಿ ಆಚರಣೆ

ಧಾರವಾಡ : ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಆಧ್ಯ ವಚನಕಾರ ಶ್ರೀ ದೇವರ ದಾಸಿಮಯ್ಯ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶ್ರೀ ಶ್ರೀ. ನಿ. ಮಮದಾಪುರದ ವಿರಕ್ತಮಠದ ಪ್ರ.ಅಭಿನವ ಮುರುಘೇಂದ್ರ ಮಹಾಸ್ವಾಮಿಗಳು ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಸಂಸದೀಯ ವ್ಯವಹಾರಗಳ ಕಲ್ಲಿದಾಳ್ ಮತ್ತು ಗಣಿ ಸಚಿವ ಪ್ರಲ್ಹಾದ ಜೋಶಿ ಅವರು ಶ್ರೀ ದೇವರ ದಾಸಿಮಯ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್ ವೀಣಾ ಚೇತನಾ ಭಾರದ್ವಾಡ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು, ಮಹಾನಗರ ಪಾಲಿಕೆ ಸದಸ್ಯ ವಿಜಯಾನಂದ ಶೆಟ್ಟಿ, ಸಮಾಜದ ಮುಖಂಡ ರವಿ ಲೋಳಿ ಮತ್ತಿತರರು ಭಾಗವಹಿಸಿದ್ದರು. ಶ್ರೀ ಹಿರೇಮಲ್ಲೂರು ಈಶ್ವರನ್ ಕಾಲೇಜಿನ ಶಿಕ್ಷಕ ಡಾ.ಈರಣ್ಣ ಇಂಜಗನೇರಿ ಶ್ರೀ ದೇವರ ದಾಸಿಮಯ್ಯ ಕುರಿತು ವಿಶೇಷ ಉಪನ್ಯಾಸ ನೀಡಿದರು.

RELATED ARTICLES
- Advertisment -
Google search engine

Most Popular