Saturday, April 19, 2025
Google search engine

Homeರಾಜ್ಯಮುಡಾ ಹಗರಣ​: ಆರ್​​ಟಿಐ ಕಾರ್ಯಕರ್ತ ಗಂಗರಾಜುಗೆ ಜೀವ ಬೆದರಿಕೆ; ಗನ್ ಮ್ಯಾನ್‌ ನೀಡುವಂತೆ ಮನವಿ

ಮುಡಾ ಹಗರಣ​: ಆರ್​​ಟಿಐ ಕಾರ್ಯಕರ್ತ ಗಂಗರಾಜುಗೆ ಜೀವ ಬೆದರಿಕೆ; ಗನ್ ಮ್ಯಾನ್‌ ನೀಡುವಂತೆ ಮನವಿ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಬದಲಿ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಗಂಭೀರ ಆರೋಪ ಮಾಡಿದ್ದ ಆರ್​​ಟಿಐ ಕಾರ್ಯಕರ್ತ ಗಂಗರಾಜು ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ. ಹೀಗಾಗಿ, ಗಂಗರಾಜು ಅವರು ಓರ್ವ ಗನ್ ಮ್ಯಾನ್‌ ನೀಡುವಂತೆ ಮುಖ್ಯಮಂತ್ರಿಗಳ ಕಾರ್ಯಾಲಯಕ್ಕೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಆದರೆ, ಗಂಗರಾಜು ಅವರಿಗೆ ಗನ್ ​ಮ್ಯಾನ್​ ನೀಡಲು ನಿರಾಕರಿಸಿದ್ದು, ಗಂಗರಾಜು ಮನೆಯ ಬಳಿ ನಿರಂತರವಾಗಿ ಪೊಲೀಸ್ ಬೀಟ್ ನಿಯೋಜಿಸಲಾಗಿದೆ. ಗಂಗರಾಜು ಮನೆಯ ಬಳಿ ಬೀಟ್ ಸಹಿ ಪುಸ್ತಕ ಇಡಲಾಗಿದೆ. ಅಲ್ಲದೇ, ಜೀವಹಾನಿ ಬಗ್ಗೆ ಮಾಹಿತಿ ಇದ್ದರೆ ಪೊಲೀಸ್ ಠಾಣೆಗೆ ದೂರು ನೀಡಿ. ಒಂದು ವೇಳೆ ನಿಮ್ಮ ಕುಟುಂಬ ಹಾಗೂ ನಿಮಗೆ ಭದ್ರತೆ ಬೇಕಿದ್ದರೇ, ನಿಯಮಾನುಸಾರ ಹಣ ಪಾವತಿಸಿ ಗನ್ ​​ಮ್ಯಾನ್ ಪಡೆಯಿರಿ ಎಂದು ಪೊಲೀಸರು ಗಂಗರಾಜು ಅವರಿಗೆ ಹಿಂಬರಹ ನೀಡಿದ್ದಾರೆ.

ಆರ್​ಟಿಐ ಕಾರ್ಯಕರ್ತ ಗಂಗರಾಜು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬದ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್​ ನಾಯಕರು ಆರೋಪಿಸಿದ್ದರು. ಅಲ್ಲದೇ, ಇವರನ್ನು ಕೂಡಲೇ ಬಂಧಿಸಬೇಕೆಂದು ಮೈಸೂರು ಜಿಲ್ಲಾ ಪೊಲೀಸ್​ ಆಯುಕ್ತರಿಗೆ ಕಾಂಗ್ರೆಸ್​​ ನಿಯೋಗ ದೂರು ನೀಡಿತ್ತು.

RELATED ARTICLES
- Advertisment -
Google search engine

Most Popular