Saturday, April 19, 2025
Google search engine

Homeರಾಜ್ಯಕೆಪಿಎಸ್‌ಸಿ-ಕೆಎಎಸ್ ಮರು ಪರೀಕ್ಷೆ; ಪ್ರತಿಪಕ್ಷಗಳ ಹೋರಾಟಕ್ಕೆ ಸಿಕ್ಕ ಜಯ: ಆರ್.ಅಶೋಕ್

ಕೆಪಿಎಸ್‌ಸಿ-ಕೆಎಎಸ್ ಮರು ಪರೀಕ್ಷೆ; ಪ್ರತಿಪಕ್ಷಗಳ ಹೋರಾಟಕ್ಕೆ ಸಿಕ್ಕ ಜಯ: ಆರ್.ಅಶೋಕ್

ಬೆಂಗಳೂರು: ಮುಂದಿನ 2 ತಿಂಗಳ ಒಳಗಡೆ ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳಿಗೆ ಮರು ಪರೀಕ್ಷೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇದು ಉದ್ಯೋಗಾಕಾಂಕ್ಷಿಗಳು ಹಾಗೂ ಪ್ರತಿಪಕ್ಷಗಳ ಹೋರಾಟಕ್ಕೆ ಸಂದ ಜಯ ಎಂಬುದಾಗಿ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.

ಇಂದು ಎಕ್ಸ್ ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವಂತ ಅವರು, ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಮೇಲೆ ಬುದ್ಧಿ ಬಂತು . ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯಲ್ಲಿ ಆಗಿರುವ ಘೋರ ಲೋಪಗಳನ್ನ ಒಪ್ಪಿಕೊಂಡು ಮರುಪರೀಕ್ಷೆ ನಡೆಸಲು ಸರ್ಕಾರ ಕೈಗೊಂಡಿರುವ ನಿರ್ಧಾರ ಅತ್ಯಂತ ಸ್ವಾಗತಾರ್ಹವಾಗಿದ್ದು, ಇದು ಲಕ್ಷಾಂತರ ಉದ್ಯೋಗಾಕಾಂಕ್ಷಿಗಳು ಹಾಗು ಪ್ರತಿಪಕ್ಷಗಳ ಹೋರಾಟಕ್ಕೆ ಸಿಕ್ಕ ಜಯವಾಗಿದೆ ಎಂದಿದ್ದಾರೆ.

ಈಗ ನಡೆದಿರುವ ಪರೀಕ್ಷೆಯಲ್ಲಿನ ಎಡವಟ್ಟುಗಳಿಗೆ ಕಾರಣರಾದ ಅಧಿಕಾರಿಗಳನ್ನ ಮತ್ತು ಸಿಬ್ಬಂದಿಗಳನ್ನ ಮುಲಾಜಿಲ್ಲದೆ ಕಪ್ಪುಪಟ್ಟಿಗೆ ಸೇರಿಸಬೇಕು. ಮುಂದೆ ಯಾವ ಸ್ಪರ್ಧಾತ್ಮಕ ಪರೀಕ್ಷೆಗಳ ಕರ್ತವ್ಯಕ್ಕೂ ಅವರು ನಿಯೋಜನೆಯಾಗದಂತೆ ಬ್ಲಾಕ್ ಲಿಸ್ಟ್ ಮಾಡಬೇಕು ತಿಳಿಸಿದ್ದಾರೆ. ಕೆಪಿಎಸ್ ಸಿ ಪರೀಕ್ಷೆ ಲಕ್ಷಾಂತರ ಯುವ ಉದ್ಯೋಗಾಕಾಂಕ್ಷಿಗಳ ಭವಿಷ್ಯದ ಪ್ರಶ್ನೆ ಆಗಿರುವುದರಿಂದ ಅವರ ಬದುಕಿನ ಜೊತೆ ಚೆಲ್ಲಾಟವಾಡದೆ, ಇದನ್ನ ಅತ್ಯಂತ ಗಂಭೀರವಾಗಿ ಪರಿಗಣಿಸಿ ಪರೀಕ್ಷೆ ಸುವ್ಯವಸ್ಥಿತವಾಗಿ, ಅಚ್ಚುಕಟ್ಟಾಗಿ ನಡೆಯುವಂತೆ ಎಚ್ಚರವಹಿಸಬೇಕು ಎಂದು ಹೇಳಿದರು.

RELATED ARTICLES
- Advertisment -
Google search engine

Most Popular