Saturday, April 19, 2025
Google search engine

HomeUncategorizedರಾಷ್ಟ್ರೀಯಅರಬ್ಬಿ ಸಮುದ್ರದಲ್ಲಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ: ಮೂವರು ಸಿಬ್ಬಂದಿ ನಾಪತ್ತೆ

ಅರಬ್ಬಿ ಸಮುದ್ರದಲ್ಲಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ: ಮೂವರು ಸಿಬ್ಬಂದಿ ನಾಪತ್ತೆ

ನವದೆಹಲಿ: ಭಾರತೀಯ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಗುಜರಾತ್ ಸಮುದ್ರದಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದು, ಅದರಲ್ಲಿದ್ದ ಇಬ್ಬರು ಪೈಲಟ್ ಗಳು ಸೇರಿ ಮೂವರು ನಾಪತ್ತೆಯಾಗಿದ್ದಾರೆ.
ಓರ್ವ ಸಿಬ್ಬಂದಿಯನ್ನು ರಕ್ಷಿಸಲಾಗಿದ್ದು, ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಕೋಸ್ಟ್ ಗಾರ್ಡ್ನ ನಾಲ್ಕು ಹಡಗುಗಳು ಮತ್ತು ಎರಡು ವಿಮಾನಗಳ ಮುಲಕ ನಾಪತ್ತೆಯಾದ ಸಿಬ್ಬಂದಿಯನ್ನು ಹುಡುಕಾಟ ನಡೆಸಲಾಗುತ್ತಿದೆ.

ಹೆಲಿಕಾಪ್ಟರ್ ನ ಅವಶೇಷಗಳು ಪತ್ತೆಯಾಗಿದ್ದು, ಸಿಬ್ಬಂದಿಯ ಬಗ್ಗೆ ಯಾವುದೇ ಸುಳಿವು ಇನ್ನೂ ಸಿಕ್ಕಿಲ್ಲ. ಹೆಲಿಕಾಪ್ಟರ್ ತುರ್ತು ಭೂಸ್ಪರ್ಶಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular