ಶಿವಮೊಗ್ಗ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಈಗಾಗಲೇ ತೀವ್ರ ಸಂಕಷ್ಟ ಎದುರಾಗಿದ್ದು, ಇದರ ಮಧ್ಯ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಕೂಡ ಪ್ರಕರಣದ ಕುರಿತು ತೀರ್ಪು ಬಂದ ಬಳಿಕ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪರಿಸ್ಥಿತಿ ಕೂಡ ಬರುತ್ತೆ ಎಂದು ನುಡಿದಿದ್ದಾರೆ.
ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯ ಮಾಡಿರುವ ಎಲ್ಲಾ ಹಗರಣಗಳು ಸಾಬೀತು ಆಗುತ್ತಿವೆ. ಯಾವುದೇ ಕಾರಣಕ್ಕೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ಏನಾಗುತ್ತೆ ಎಂದು ಈಗಲೇ ಹೇಳಲು ಸಾಧ್ಯವಿಲ್ಲ ಎಂದು ಶಿವಮೊಗ್ಗದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿಕೆ ನೀಡಿದರು.
ರಾಜ್ಯ ರಾಜಕಾರಣದಲ್ಲಿ ಎಲ್ಲಾ ಹಂತದಲ್ಲೂ ಬದಲಾವಣೆ ಆಗಲಿದೆ. ನಾವು ಯಾವುದೇ ಹೋರಾಟ ಮಾಡಲ್ಲ. ಆದರೆ ಸಿಎಂ ಸಿದ್ದರಾಮಯ್ಯ ಅವರ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ತೀರ್ಪು ಬಂದ ಬಳಿಕ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸ್ಥಿತಿ ಬರಲಿದೆ ಎಂದು ಹೇಳಿದರು.