ಬಳ್ಳಾರಿ: ಬಳ್ಳಾರಿಯ ಶ್ರೀಕೃಷ್ಣ ದೇವರಾಯ ವಿವಿಯಿಂದ ಈ ಬಾರಿ ನಟಿ ಉಮಾಶ್ರೀ ಸೇರಿ ಮೂವರಿಗೆ ಗೌರವ ಡಾಕ್ಟರೇಟ್ ಘೋಷಣೆ ಮಾಡಿದೆ.
ರಂಗಭೂಮಿ, ಕಲೆ ಮತ್ತು ಸಮಾಜ ಸೇವೆ ವಿಭಾಗದಲ್ಲಿ ಸಾಧನೆಗೈದ ಕನ್ನಡ ಚಲನಚಿತ್ರದ ಖ್ಯಾತ ಪೋಷಕ ನಟಿ ಉಮಾಶ್ರೀ, ಕೈಗಾರಿಕೆ ಮತ್ತು ಸಮಾಜ ಸೇವೆ ವಿಭಾಗದಲ್ಲಿ ಕೈ ಜೋಡಿಸಿದ ಎಸ್.ಕೆ.ಮೋದಿ ಅವರಿಗೆ ಮರಣೋತ್ತರ, ಧಾರ್ಮಿಕ ಹಾಗೂ ಶಿಕ್ಷಣ ಕ್ಷೇತ್ರದಲ್ಲಿನ ನಿರಂತರ ಸೇವೆಗಾಗಿ ಬಳ್ಳಾರಿ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಚಂದ್ರಮೌಳೇಶ್ವರ ಶಿವಾಚಾರ್ಯ ಸ್ವಾಮೀಜಿ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ.
ಸೆ.೬ ರಂದು ವಿವಿ ಆವರಣದಲ್ಲಿ ನಡೆಯುವ ಘಟಿಕೋತ್ವವ ಕಾರ್ಯಕ್ರಮದಲ್ಲಿ ಅವರಿಗೆ ಪ್ರಧಾನ ಮಾಡಲಾಗುತ್ತದೆ ಎಂದು ಕುಲಸಚಿವರು ತಿಳಿಸಿದ್ದಾರೆ.