ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ : ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಸಾಲಿಗ್ರಾಮ ತಾಲೂಕಿನ ಕಾಳಮ್ಮನ ಕೊಪ್ಪಲು ಗ್ರಾಮದ ಶಿಕ್ಷಕ ಎಂ.ಜಯಸ್ವಾಮಿ ಭಾಜನರಾಗಿದ್ದಾರೆ.
ಇವರು 1997ರಲ್ಲಿ ಶಿಕ್ಷಕ ವೃತ್ತಿಗೆ ಸೇರಿ ಪಿರಿಯಾಪಟ್ಟಣ ತಾಲ್ಲೂಕಿನ ಬಾರಸೆ ಹಾಗೂ ಹುಣಸೆತೊಪ್ಪಲು, ಸಾಲಿಗ್ರಾಮ ತಾಲ್ಲೂಕಿನ ಹೆಬ್ಸೂರು, ಸಂಬರವಳ್ಳಿಗ್ರಾಮದ ಸರ್ಕಾರಿ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸಿ ಪ್ರಸ್ತುತ ತಾಲೂಕಿನ ಹೊಸೂರು ಕಾವಲು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಕಳೆದ 28 ವರ್ಷಗಳಿಂದಲೂ ಶಿಕ್ಷಕರಾಗಿ ಉತ್ತಮ ಸೇವೆ ಸಲ್ಲಿಸುತ್ತಿರುವುದನ್ನು ಪರಿಗಣಿಸಿ ಶಿಕ್ಷಣ ಇಲಾಖೆಯು 2024-25ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಇವರನ್ನು ಆಯ್ಕೆ ಮಾಡಿ ಮೈಸೂರಿನಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.