ಮಂಡ್ಯ: ಗಗನಚುಕ್ಕಿ ಜಲಪಾತೋತ್ಸವ ಹಾಗೂ ಶ್ರೀರಂಗಪಟ್ಟಣ ದಸರಾ ಗೆ ಸ್ಥಳೀಯ ಕಲಾವಿದರನ್ನು ಕಡೆಗಣನೆ ಮಾಡಲಾಗಿದೆ ಎಂದು ಆರೋಪಿಸಿ ಜಿಲ್ಲಾಡಳಿತದ ವಿರುದ್ಧ ಮಂಡ್ಯ ಸ್ಥಳೀಯ ಕಲಾವಿದರು ಇಂದು ಪ್ರತಿಭಟನೆ ನಡೆಸಿದರು. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆಯಿಂದ ಡಿಸಿ ಕಚೇರಿಯವರಿಗೆ ಮೆರವಣಿಗೆ ಮಾಡಲಾಯಿತು. ಡಿಸಿ ಕಚೇರಿ ಬಳಿ ಜಿಲ್ಲಾಡಳಿತದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ ನಡೆಯುತ್ತಿರುವ ಉತ್ಸವಗಳಿಗೆ ಸ್ಥಳೀಯ ಕಲಾವಿದರನ್ನು ಕಡೆಗಣಿಸಿದ್ದಾರೆ ಇವೆಂಟ್ಸ್ ಮ್ಯಾನೇಜ್ಮೆಂಟ್ಗಳಿಗೆ ಕಾರ್ಯಕ್ರಮಗಳನ್ನು ಕೊಟ್ಟು ಸ್ಥಳೀಯ ಕಲಾವಿದರು ಅವಕಾಶ ವಂಚಿತರಾಗುತ್ತಿದ್ದಾರೆ. ಆದ್ದರಿಂದ ಸ್ಥಳೀಯ ಕಲಾವಿದರಿಗೆ ಮೊದಲ ಆದ್ಯತೆ ನೀಡಬೇಕು. ಕಲಾವಿದರಿಂದ ಅರ್ಜಿ ಆಹ್ವಾನಿಸುವ ಬದಲು ಕಲಾವಿದರ ಕಲಾತಂಡಗಳ ಪಟ್ಟಿ ಮಾಡಿ. ಎಲ್ಲರಿಗೂ ಸಮಾನಾಂತರವಾಗಿ ಕಾರ್ಯಕ್ರಮ ನೀಡಬೇಕು.
ಸ್ಥಳೀಯ ಕಲಾವಿದರ ಹೊಟ್ಟೆಯ ಮೇಲೆ ಹೊಡೆದು ಇವೆಂಟ್ ಗೆ ಕೊಟ್ಟಿದ್ದಾರೆ.

ಕಾರ್ಯಕ್ರಮದಲ್ಲಿ ಸಿಗುವ ಕಮಿಷನ್ ಆಸೆಗೆ ಬಿದ್ದು ಈ ರೀತಿಯ ಧೋರಣೆ ಮಾಡುತ್ತಿದ್ದಾರೆ. ಆದ್ದರಿಂದ ಈ ಕೂಡಲೇ ಜಿಲ್ಲಾಡಳಿತ ಬಡ ಕಲಾವಿದರ ಕುಟುಂಬದ ನೆರವಿಗೆ ಧಾವಿಸಬೇಕು ಇಲ್ಲದಿದ್ದರೆ ಜಲಪಾತೋತ್ಸವದ ವೇಳೆ ಕಲಾವಿದರಿಂದ ಕಪ್ಪು ಪಟ್ಟಿ ಪ್ರದರ್ಶನ ಮಾಡಲಾಗುತ್ತದೆ ಎಂದು ಕಲಾವಿದ ಸಂತೆ ಕಸಲಗೆರೆ ಬಸವರಾಜು ಎಚ್ಚರಿಕೆ ನೀಡಿದ್ದಾರೆ.