Saturday, April 19, 2025
Google search engine

Homeರಾಜ್ಯಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ : ಡಿ ಕೆ ಸುರೇಶ್ ಸ್ಪಷ್ಟನೆ

ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ : ಡಿ ಕೆ ಸುರೇಶ್ ಸ್ಪಷ್ಟನೆ

ಬೆಂಗಳೂರು: ಸಿದ್ದರಾಮಯ್ಯ ಅವರ ಸ್ಥಾನಕ್ಕೆ ಚ್ಯುತಿ ಬರುವುದಿಲ್ಲ. ಅವರೇ ಐದು ವರ್ಷ ಸಿಎಂ ಆಗಿರುತ್ತಾರೆ. ಹೈಕಮಾಂಡ್ ಕೂಡ ಇದನ್ನು ಸ್ಪಷ್ಟವಾಗಿ ಹೇಳಿದೆ. ಸಿಎಂ ಬದಲಾವಣೆ ಚರ್ಚೆ ಕಾಲಹರಣದ ಮಾತು ಎಂದು ಕಾಂಗ್ರೆಸ್ ಮಾಜಿ ಸಂಸದ ಡಿ ಕೆ ಸುರೇಶ್ ಹೇಳಿದರು.

ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿ, ಸಿಎಂ ಬದಲಾವಣೆ ಚರ್ಚೆ ವ್ಯರ್ಥ ಪ್ರಯತ್ನ. ಕೆಲವರಿಗೆ ಮುಖ್ಯಮಂತ್ರಿ ಆಗಬೇಕೆಂಬ ಆಸೆ ಇರಬಹುದು. ಅದು ಈ ಅವಧಿಯಲ್ಲಿ ಸಾಧ್ಯವಿಲ್ಲ ಎಂದರು.

ಕೆಲವರಿಗೆ ಮುಖ್ಯಮಂತ್ರಿ ಆಗುವ ಆಸೆ ಇರಬಹುದು, ಅವರೆಲ್ಲರೂ ಹಿರಿಯ ನಾಯಕರೇ. ಆದರೆ, ಖಾಲಿ ಇಲ್ಲದ ಹುದ್ದೆಗೆ ಪೈಪೋಟಿ ನಡೆಸುವುದು ಸೂಕ್ತವಲ್ಲ. ಎಲ್ಲ ಶಾಸಕರ ಅಭಿಪ್ರಾಯ ಆಧರಿಸಿ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಲಾಗಿದೆ. ಎಲ್ಲ ಶಾಸಕರು ಸಿದ್ದರಾಮಯ್ಯ ಅವರ ಬೆಂಬಲಕ್ಕೆ ನಿಂತಿದ್ದಾರೆ. ಹೈಕಮಾಂಡ್ ಕೂಡ ಸಿದ್ದರಾಮಯ್ಯ ಅವರ ಬೆನ್ನಿಗಿದೆ ಎಂದು ಹೇಳಿದರು.

ರಾಜಕಾರಣದಲ್ಲಿ ಗೊಂದಲ ಸೃಷ್ಟಿಸಬೇಕು ಎಂದೇ ಕೆಲವರು ಇರುತ್ತಾರೆ. ಗೊಂದಲಗಳಿಂದಲೇ ನಾಯಕರಾಗಬೇಕು ಎಂಬುದು ಅವರ ಆಸೆ. ಕೆಲಸ ಮಾಡಿ ನಾಯಕರಾಗಬೇಕು ಎಂದು ಸಿಎಂ ಸ್ಥಾನದ ಬಗ್ಗೆ ಆಕಾಂಕ್ಷೆ ವ್ಯಕ್ತಪಡಿಸಿರುವ ಸ್ವಪಕ್ಷದ ನಾಯಕರಿಗೆ ಪರೋಕ್ಷವಾಗಿ ಕುಟುಕಿದರು.

RELATED ARTICLES
- Advertisment -
Google search engine

Most Popular