ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯರಪ್ಪ ಅವರಿಗೆ ಮತ್ತೆ ತಾತ್ಕಾಲಿಕ ರಿಲೀಫ್ ಅನ್ನು ಕೋರ್ಟ್ ನೀಡಿದೆ. ಇಂದು ಅವರ ವಿರುದ್ಧದ ಪೋಕ್ಸೋ ಕೇಸ್ ಪ್ರಕರಣದ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್.೧೯ಕ್ಕೆ ಹೈಕೋರ್ಟ್ ಮುಂದೂಡಿದೆ.
ಇಂದು ಸೋಮವಾರ ಕರ್ನಾಟಕ ಹೈಕೋರ್ಟ್‌ನಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ಪ್ರಕರಣ ರದ್ದು ಕೋರಿ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆ ನಡೆಯಿತು. ಈ ವೇಳೆ ಹೈಕೋರ್ಟ್ ನ್ಯಾಯಪೀಠಕ್ಕೆ ವಕೀಲ ಅಶೋಕ್ ನಾಯಕ್ ಅವರು ಸೆ.೩ರಂದು ಪ್ರೊ.ರವಿವರ್ಮ ಕುಮಾರ್ ಅವರನ್ನು ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ನೇಮಕ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಈ ಹಿನ್ನಲೆಯಲ್ಲಿ ಹೈಕೋರ್ಟ್ ಪ್ರಕರಣದ ವಿಚಾರಣೆಯನ್ನು ಸೆ.೧೯ಕ್ಕೆ ಮುಂದೂಡಿತು.
ಪೋಕ್ಸೋ ಕೇಸ್ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರನ್ನೊಳಗೊಂಡಂತ ಏಕ ಸದಸ್ಯ ಪೀಠವು ವಿಚಾರಣೆಯನ್ನು ಮುಂದೂಡಿದೆ.