2026 ರೊಳಗೆ ದೇವಾಲಯ ಜೀರ್ಣೋದ್ಧಾರ ಕೆಲಸ ಪೂರ್ಣ: ಶಾಸಕ ಡಿ.ರವಿಶಂಕರ್
ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್ ನಗರ : ಕೆ.ಆರ್.ನಗರ ಪಟ್ಟಣದ ಹೊರ ವಲಯದಲ್ಲಿರುವ ಮೀನಾಕ್ಷಿ ಸಮೇತ ಅರ್ಕೇಶ್ವರ ಸ್ವಾಮಿ ದೇವರ ದೇವಾಲಯದ ಜೀರ್ಣೋದ್ಧಾರ ಕಾಮಗಾರಿಗೆ 210 ಲಕ್ಷ ರೂಗಳನ್ಬು ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು 2026 ರೊಳಗೆ ಕೆಲಸ ಪೂರ್ಣಗೊಳಿಸಲಾಗುತ್ತದೆ ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.
ಪ್ರಾಚ್ಯವಸ್ತು ಇಲಾಖೆಯ ವತಿಯಿಂದ 90 ಲಕ್ಷ ರುಗಳ ವೆಚ್ಚದಲ್ಲಿ ಕೈಗೊಂಡಿರುವ ದೇವಾಲಯದ ಸಂರಕ್ಷಣಾ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು ಇದರ ಜತೆಗೆ ಕಾವೇರಿ ನದಿ ಮಧ್ಯದಲ್ಲಿ ನಿರ್ಮಾಣ ಮಾಡುತ್ತಿರುವ ಶಿವನ ಪ್ರತಿಮೆಯ ಕೆಲಸವನ್ಬು ವೇಗವಾಗಿ ಮಾಡಿಸಲಾಗುತ್ತದೆ ಎಂದರು.
ದೇವಾಲಯದ ಜೀರ್ಣೋದ್ದಾರ ಕಾಮಗಾರಿ ನಡೆಯುವಾಗ ದರ್ಶನಕ್ಕೆ ತೊಂದರೆಯಾಗಲಿದ್ದು ಸಾರ್ವಜನಿಕರು ಸಹಕಾರ ನೀಡಬೇಕೆಂದು ಕೋರಿದ ಅವರು ಪ್ರವಾಸೋದ್ಯಮ ಇಲಾಖೆಯ ವತಿಯಿಂದಲೂ ಅಗತ್ಯ ಅನುದಾನ ಬಿಡುಗಡೆ ಮಾಡಿಸಿ ದೇವಾಲಯದ ಸುತ್ತ ಉದ್ಯಾನವನ ನಿರ್ಮಾಣ ಮಾಡಿಸುವುದಾಗಿ ಮಾಹಿತಿ ನೀಡಿದರು.
ತಾಲೂಕಿನ ಹೆಬ್ಬಾಳು ಹೋಬಳಿಯ ಕಪ್ಪಡಿ ಪುಣ್ಯಕ್ಷೇತ್ರದ ಬಳಿ ಕಾವೇರಿ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಮಾಡಲು ರಾಜ್ಯ ಸರ್ಕಾರದಿಂದ 25 ಕೋಟಿ ಬಿಡುಗಡೆಯಾಗಿದ್ದು ಶೀಘ್ರದಲ್ಲಿಯೇ ಟೆಂಡರ್ ನಡೆಸಿ ಕಾಮಗಾರಿ ಆರಂಭಿಸಲಾಗುತ್ತದೆ ಎಂದು ಪ್ರಕಟಿಸಿದರು.
ಕಪ್ಪಡಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೂ ಹೆಚ್ಚಿನ ಆದ್ಯತೆ ನೀಡಲಿದ್ದು ಈ ಸಂಬಂಧ ಮಠದ ಶ್ರೀಗಳ ಜೊತೆ ಚರ್ಚಿಸಿ ಅವರ ಸಲಹೆ ಮತ್ತು ಮಾರ್ಗದರ್ಶನ ಪಡೆದು ಭಕ್ತರು ಮತ್ತು ಪ್ರವಾಸಿಗರಿಗೆ ಅನುಕೂಲವಾಗುವ ಉತ್ತಮ ಕೆಲಸಗಳನ್ನು ಮಾಡುವುದಾಗಿ ನುಡಿದರು.
ಕೆ ಆರ್ ನಗರದಿಂದ ಹೆಬ್ಬಾಳು ಮಾರ್ಗವಾಗಿ ಚುಂಚನಕಟ್ಟೆ ಹೋಬಳಿ ಕೇಂದ್ರ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ ಅಗಲೀಕರಣಕ್ಕೆ ಆರು ಕೋಟಿ ರೂ ಹಣ ಮಂಜೂರಾಗಿದ್ದು ಕಾಮಗಾರಿಯನ್ನು ಶೀಘ್ರದಲ್ಲಿಯೇ ಆರಂಭಿಸುವುದಾಗಿ ಹೇಳಿದ ಶಾಸಕರು ಅಭಿವೃದ್ಧಿ ಕೆಲಸ ಮಾಡುವಾಗ ನಾಗರೀಕರು ನನ್ನೊಂದಿಗೆ ಕೈಜೋಡಿಸಬೇಕೆಂದು ಮನವಿ ಮಾಡಿದರು.
ದೇವಾಲಯದ ಜೀರ್ಣೋದ್ದಾರ ಕಾಮಗಾರಿ ನಡೆಯುವುದರಿಂದ 2025 ನೇ ಸಾಲಿನ ಫೆ, ತಿಂಗಳಲ್ಲಿ ನಡೆಯಬೇಕಿದ್ದ ಜಾತ್ರೆ ಮತ್ತು ರಥೋತ್ಸವವನ್ನು ರದ್ದುಪಡಿಸಲಾಗಿದ್ದು ಭಕ್ತರು ಮತ್ತು ಸಾರ್ವಜನಿಕರು ವಿಚಾರವನ್ನು ಅರಿತು ಸಹಕರಿಸಿ ಎಂದರು.
ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ. ಎಸ್. ಮಹೇಶ್, ಮಾಜಿ ಅಧ್ಯಕ್ಷ ವೈ.ಎಸ್. ಕುಮಾರ್, ನಿರ್ದೇಶಕರಾದ ಸೈಯದ್ ಜಾಬೀರ್, ಸರಿತಾ ಜವರಪ್ಪ, ಕೆ.ಎನ್. ಪ್ರಸನ್ನ ಕುಮಾರ್, ಪುರಸಬೆ ಸದಸ್ಯರಾದ ಕೋಳಿ ಪ್ರಕಾಶ್, ಶಂಕರಸ್ವಾಮಿ, ನಟರಾಜು, ಮಾಜಿ ಸದಸ್ಯ ಕೆ.ವಿನಯ್, ರಾಜ್ಯ ಕಾಂಗ್ರೆಸ್ ಎಸ್ ಟಿ ವಿಭಾಗದ ಉಪಾಧ್ಯಕ್ಷ ಕಲ್ಲಹಳ್ಳಿ ಶ್ರೀನಿವಾಸ್, ಜಿಲ್ಲಾ ಕಾಂಗ್ರೆಸ್ ಮುಖಂಡ ಗಂಧನಹಳ್ಳಿ ವೆಂಕಟೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ. ಎಸ್. ಮಹದೇವ್, ಉದಯಶಂಕರ್, ನಗರ ಕಾಂಗ್ರೆಸ್ ಅಧ್ಯಕ್ಷ ಎಂ.ಜೆ.ರಮೇಶ್, ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಎಸ್.ಸಿದ್ದೇಗೌಡ, ಎಪಿಎಂಸಿ ಮಾಜಿ ಉಪಾಧ್ಯಕ್ಷ ಎಚ್. ನಾಗೇಂದ್ರ, ತಾಲೂಕು ಕುರುಬರ ಸಂಘದ ಅಧ್ಯಕ್ಷ ಶಿವಣ್ಣ, ಕಾಂಗ್ರೆಸ್ ಮುಖಂಡರಾದ ಎಂಎಸ್ ಅನಂತ್ ಕಂಠಿಕುಮಾರ್ ತಹಸಿಲ್ದಾರ್ ಜೆ ಸುರೇಂದ್ರ ಮೂರ್ತಿ ಪುರಸಭೆ ಮುಖ್ಯ ಅಧಿಕಾರಿ ಬಿ ಬಿ ವೆಂಕಟೇಶ್ ಕಾರ್ಯನಿರ್ವಾಣಾಧಿಕಾರಿ ಕುಲದೀಪ್ ಮತ್ತಿತರರು ಇದ್ದರು.