Sunday, April 20, 2025
Google search engine

Homeಅಪರಾಧಶಿರಾಡಿ ಘಾಟ್‌ನಲ್ಲಿ ಕಾರು-ಲಾರಿ ಮುಖಾಮುಖಿ ಡಿಕ್ಕಿ: ಓರ್ವ ಸಾವು, ಐದು ಮಂದಿಗೆ ಗಾಯ

ಶಿರಾಡಿ ಘಾಟ್‌ನಲ್ಲಿ ಕಾರು-ಲಾರಿ ಮುಖಾಮುಖಿ ಡಿಕ್ಕಿ: ಓರ್ವ ಸಾವು, ಐದು ಮಂದಿಗೆ ಗಾಯ

ಸಕಲೇಶಪುರ: ಎರಡು ಕಾರುಗಳು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಸಾವಿಗೀಡಾಗಿ, ಐದು ಮಂದಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ೭೫ರ ಶಿರಾಡಿ ಘಾಟ್ ವ್ಯಾಪ್ತಿಯ ಕೆಂಪುಹೊಳೆ ಬಳಿ ನಡೆದಿದೆ.

ಧರ್ಮಸ್ಥಳದಿಂದ-ಬೆಂಗಳೂರು ಕಡೆಗೆ ಬರುತ್ತಿದ್ದ ಕಾರುಗಳು ಒಂದನ್ನೊಂದು ಹಿಂದಿಕ್ಕುತ್ತಿದ್ದಾಗ ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಸರಕು ತುಂಬಿದ ಲಾರಿಗೆ ಕೆಂಪುಹೊಳೆ ತಿರುವಿನಲ್ಲಿ ಡಿಕ್ಕಿ ಹೊಡೆದಿದೆ.

ಲಾರಿ ಪ್ರಪಾತಕ್ಕೆ ಬೀಳುವುದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಓರ್ವನ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಮಂಗಳೂರಿಗೆ ರವಾನಿಸಲಾಗಿದೆ. ಉಳಿದ ಜನರನ್ನು ಸಕಲೇಶಪುರದ ಸರ್ಕಾರಿ ಕ್ರಾಫರ್ಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

RELATED ARTICLES
- Advertisment -
Google search engine

Most Popular