ಮೈಸೂರು: ಲಕ್ಷ್ಮಿಕಾಂತ ನಗರದಲ್ಲಿರುವ ಶ್ರೀ ಆದಿಚುಂಚನಗಿರಿ ಶಾಖಾ ಮಠದಲ್ಲಿ ಮೊದಲನೇ ವರ್ಷದ ವಾರ್ಷಿಕೋತ್ಸವ ಸಮಾರಂಭದ ಅಂಗವಾಗಿ ನಡೆದಚಂಡಿಕಾ ಹೋಮ ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಠದ ಜಗದ್ಗುರುಗಳಾದ ಡಾ. ಶ್ರೀ ನಿರ್ಮಲಾನಂದಸ್ವಾಮೀಜಿಯವರ ಭಾಗವಹಿಸಿ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ಶ್ರೀ ಸೋಮೇಶ್ವರನಾಥ ಸ್ವಾಮೀಜಿ, ಶೇಖರ್ ಸ್ವಾಮೀಜಿ, ವಿಧಾನ ಪರಿಷತ್ ಮಾಜಿ ಸದಸ್ಯ ಡಿ. ಮಾದೇಗೌಡ, ವಿದ್ಯಾವರ್ಧಕ ವಿದ್ಯಾ ಸಂಸ್ಥೆ ಅಧ್ಯಕ್ಷ ಗುಂಡಪ್ಪಗೌಡ, ಪ್ರೊ. ಕೃಷ್ಣೇಗೌಡ, ಎನ್.ಜಿ. ನಾರಾಯಣ್, ಜಿ.ಪಂ. ಮಾಜಿ ಸದಸ್ಯ ಚಂದ್ರಿಕಾ ಸುರೇಶ್, ಕಾಲೇಜು ವಿದ್ಯಾರ್ಥಿನಿಯರು ಭಾಗವಹಿಸಿದ್ದರು.