Saturday, April 19, 2025
Google search engine

Homeರಾಜ್ಯಸುದ್ದಿಜಾಲರೇಷ್ಮೆ ಬೆಳೆಗಾರರ ಸಮಸ್ಯೆಗಳಿಗೆ ಶೀಘ್ರದಲ್ಲೇ ಪರಿಹಾರ : ಸಚಿವ ಕೆ. ವೆಂಕಟೇಶ್

ರೇಷ್ಮೆ ಬೆಳೆಗಾರರ ಸಮಸ್ಯೆಗಳಿಗೆ ಶೀಘ್ರದಲ್ಲೇ ಪರಿಹಾರ : ಸಚಿವ ಕೆ. ವೆಂಕಟೇಶ್

ರಾಮನಗರ: ಜಿಲ್ಲೆಯ ರೇಷ್ಮೆ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಆದಷ್ಟು ಶೀಘ್ರವಾಗಿ ಅವರ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿಕೊಡುವುದಾಗಿ ಪಶುಸಂಗೋಪನೆ ಹಾಗೂ ರೇಷ್ಮೆ ಸಚಿವ ಕೆ. ವೆಂಕಟೇಶ್ ಅವರು ಜಿಲ್ಲೆಯ ರೇಷ್ಮೆ ಬೆಳೆಗಾರರಿಗೆ ಭರವಸೆ ನೀಡಿದರು.

ಅವರು ಸೆ. 10ರ ಮಂಗಳವಾರ ರಾಮನಗರ ರೇಷ್ಮೆ ಗೂಡಿನ ಮಾರುಕಟ್ಟೆಗೆ ಭೇಟಿ ನೀಡಿ ನಂತರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ರಾಮನಗರ ಜಿಲ್ಲೆಯ ರೇಷ್ಮೆ ಬೆಳೆಯ ಕುರಿತು ಶಾಸಕರು, ಅಧಿಕಾರಿಗಳು, ರೈತರು ಮತ್ತು ರೀರ‍್ಸ್ಗಳೊಂದಿಗೆ ಹಮ್ಮಿಕೊಂಡಿದ್ದ ಚರ್ಚೆಯಲ್ಲಿ ಮಾತನಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊಟ್ಟ ಮೊದಲ ಬಾರಿಗೆ ಸಚಿವರಾಗಿದ್ದಾಗ ರೇಷ್ಮೆ ಇಲಾಖೆಯನ್ನು ನಿಭಾಯಿಸಿದ್ದರು, ಅವರಿಗೆ ರೇಷ್ಮೆ ಬೆಳೆಗಾರರ ಸಮಸ್ಯೆಗಳನ್ನು ಮನದಟ್ಟು ಮಾಡಿಕೊಡುವುದಾಗಿ ತಿಳಿಸಿದ ಸಚಿವರು, ರಾಜ್ಯ ಸರ್ಕಾರವು ರೇಷ್ಮೆ ಬೆಳೆಗಾರರಿಗೆ ಒದಗಿಸಿರುವ ಸವಲತ್ತುಗಳನ್ನು ನಿಗದಿತ ಅವಧಿಯೊಳಗೆ ತಲುಪಿಸುವುದು ಇಲಾಖೆಯ ಕರ್ತವ್ಯ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

 ರೇಷ್ಮೆ ಬೆಳೆಗಾರರು, ರೀರ‍್ಸ್ಗಳ ಕಷ್ಟವನ್ನು ಅರಿತು ರಾಜ್ಯ ಸರ್ಕಾರವು ಹಲವಾರು ಯೋಜನೆಗಳನ್ನು ಜಾರಿ ಮಾಡಿದೆ ಅಧಿಕಾರಿಗಳ ಈ ಯೋಜನೆಗಳನ್ನು ರೈತರಿಗೆ ತಲುಪಿಸಬೇಕು. ಕ್ಷೇತ್ರ ಭೇಟಿ ನೀಡುವ ಮೂಲಕ ಅಧಿಕಾರಿಗಳು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಸ್ಥೂಲವನ್ನು ಅರಿತುಕೊಳ್ಳಬೇಕು, ಜಿಲ್ಲೆಯಲ್ಲಿ ನೂತನ ರೇಷ್ಮೆ ಮಾರುಕಟ್ಟೆಯನ್ನು ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ಬಹಳ ವ್ಯವಸ್ಥಿತವಾಗಿ ನಿರ್ಮಿಸಲಾಗುತ್ತಿದೆ, ಅಲ್ಲದೇ ವಿವಿಧ ಜಿಲ್ಲೆಗಳಲ್ಲಿ ಇಲಾಖೆಗೆ ಸೇರಿದ ಸಾಕಷ್ಟು ಜಮೀನು ಲಭ್ಯವಿದ್ದು, ಅಲ್ಲಿಯೂ ಬೆಳೆಗಾರರ ಹಿತರಕ್ಷಣೆ ದೃಷ್ಟಿಯಿಂದ ವಿವಿಧ ರೀತಿಯ ಚಟುವಟಿಕೆಗಳನ್ನು ಮಾಡಲಾಗುವುದು ಎಂದರು.

ರೇಷ್ಮೆ ಇಲಾಖೆಯ ಹಣಕಾಸಿ ತೊಂದರೆಗಳನ್ನು ನಿವಾರಿಸಲು ಮುಖ್ಯಮಂತ್ರಿಗಳೊAದಿಗೆ ಚರ್ಚಿಸಲಾಗಿದೆ,  ರೇಷ್ಮೆ ಬೆಳೆಗಾರರು, ರೀರ‍್ಸ್ಗಳಿಗೆ ಒಳ್ಳೆಯದನ್ನು ಮಾಡಬೇಕು. ಈ ಉದ್ದಿಮೆ ಉಳಿಯಲು ಸಹಾಯ ಮಾಡಬೇಕು ಎನ್ನುವುದನ್ನ ಅರಿತು ಕೆಲಸ ಮಾಡಲಾಗುತ್ತಿದೆ, ಈ ದಿಸೆಯಲ್ಲಿ ರಾಜ್ಯದ ಉಪ ಮುಖ್ಯಮಂತ್ರಿಗಳು ಕೈಜೋಡಿಸಿದ್ದಾರೆ, ಮುಂಬರುವ ದಿನಗಳಲ್ಲಿ ರೇಷ್ಮೆ ಬೆಳೆಗಾರರಿಗೆ ಎಲ್ಲ ರೀತಿಯ ಸೌಕರ್ಯ ಹಾಗೂ ರೀರ‍್ಸ್ಗಳಿಗೆ ಸಹಕಾರ ನೀಡಲಾಗುವುದು ಎಂದು ಹೇಳಿದರು. 

ಸ್ಥಳೀಯ ಶಾಸಕಾರದ ಇಕ್ಬಾಲ್ ಹುಸೇನ್ ಅವರು ಮಾತನಾಡಿ, ಪ್ರತೀ ಮೂರು ತಿಂಗಳಿಗೊಮ್ಮೆ ರೇಷ್ಮೆ ಬೆಳೆಗಾರರು ಹಾಗೂ ರೀರ‍್ಸ್ಗಳ ಸಭೆ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಬೇಕು. ನಗರದಲ್ಲಿರುವ ಮಾರುಕಟ್ಟೆಯಲ್ಲಿ ಪ್ರತೀ ದಿನ 2.5 ರಿಂದ 3 ಕೋಟಿ ರೂ.ಗಳ ವಹಿವಾಟು ನಡೆಯುತ್ತಿದ್ದು, 6 ಲಕ್ಷಕ್ಕೂ ಹೆಚ್ಚು ಮೊತ್ತ ತೆರಿಗೆ ಪಾವತಿಲಾಗುತ್ತಿದೆ. ಆದ ಕಾರಣ ಹಳೇಯ ಮಾರುಕಟ್ಟೆಯಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡಬೇಕು. ಶೌಚಾಲಯ, ಕ್ಯಾಂಟೀನ್, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಇತರೆ ಸೌಕರ್ಯಗಳನ್ನು ಒದಗಿಸಬೇಕು, ಇಲಾಖೆಗೆ ಅಗತ್ಯವಿರುವ ಸಿಬ್ಬಂದಿ ನೇಮಕಾತಿ ಮಾಡಿಕೊಡಬೇಕು ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯರಾದ ಎಸ್. ರವಿ ಮಾತನಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆ ಅಧ್ಯಕ್ಷರಾದ ರಾಜು, ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಚೇತನ್, ರೇಷ್ಮೆ, ಕೃಷಿ ಅಭಿವೃದ್ಧಿ ಆಯುಕ್ತರಾದ ಎಂ. ಬಿ. ರಾಜೇಶ್ ಗೌಡ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಸರ್ಕಾರದ ಕಾರ್ಯದರ್ಶಿಗಳಾದ ಡಾ. ಶರ್ಮಾ ಇಕ್ಬಾಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿಗ್ವಿಜಯ್ ಬೋಡ್ಕೆ,  ಉಪವಿಭಾಗಧಿಕಾರಿ ಬಿನೋಯ್, ರೇಷ್ಮೆ ಇಲಾಖೆಯ ಅಧಿಕಾರಿಗಳು ವೇದಿಕೆಯಲ್ಲಿದ್ದರು.

ಅಪಾರ ಸಂಖ್ಯೆಯ ರೇಷ್ಮೆ ಬೆಳೆಗಾರರು, ರರ‍್ಸ್ ಸಲಹಾ ಸಮಿತಿಯ ಸದಸ್ಯರು, ರೇಷ್ಮೆ ಬೆಳೆಗಾರರ ಹಿತರಕ್ಷಣಾ ಸದಸ್ಯರು ಭಾಗವಹಿಸಿದ್ದರು.

RELATED ARTICLES
- Advertisment -
Google search engine

Most Popular