ಧಾರವಾಡ : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಸಿದ್ದರಾಮಯ್ಯ ಅವರೇ ೫ ವರ್ಷವೂ ಸಿಎಂ ಆಗಿ ಇರುತ್ತಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಸ್ಪಷ್ಟನೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ. ೫ ವರ್ಷ ಯಾವುದೇ ಕಾರಣಕ್ಕೂ ಸರ್ಕಾರ ಪತನವಾಗುವುದಿಲ್ಲ. ಶಾಸಕರು, ಸಚಿವರು, ಸಂಸದರು ಸಿಎಂ ಸಿದ್ದರಾಮಯ್ಯ ಪರವಾಗಿದ್ದಾರೆ ಎಂದು ತಿಳಿಸಿದ್ದಾರೆ.
ನಾವು ಎಲ್ಲಾ ಸಚಿವರು ಸಿಎಂ ಸಿದ್ದರಾಮಯ್ಯ ಪರವಾಗಿ ಗಟ್ಟಿಯಾಗಿ ನಿಲ್ಲುತ್ತೇವೆ. ಜಮ್ಮು-ಕಾಶ್ಮೀರದ ಚುನಾವಣೆ ಬಳಿಕ ಮೋದಿ ಸರ್ಕಾರ ಅಲ್ಲಾಡುತ್ತದೆ ಎಂದು ಹೇಳಿದ್ದಾರೆ.