Sunday, April 20, 2025
Google search engine

Homeರಾಜ್ಯಮುಖ್ಯಮಂತ್ರಿ ಸ್ಥಾನದ ವಿಚಾರ ಗಲ್ಲಿ, ಬೀದಿಗಳಲ್ಲಿ ಮಾತನಾಡುವ ವಿಷಯವಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಮುಖ್ಯಮಂತ್ರಿ ಸ್ಥಾನದ ವಿಚಾರ ಗಲ್ಲಿ, ಬೀದಿಗಳಲ್ಲಿ ಮಾತನಾಡುವ ವಿಷಯವಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ : ಮುಖ್ಯಮಂತ್ರಿ ಸ್ಥಾನದ ವಿಚಾರ ಗಲ್ಲಿ, ಬೀದಿಗಳಲ್ಲಿ ಮಾತನಾಡುವಂತದ್ದಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಬೆಳಗಾವಿಯಲ್ಲಿ ಬುಧವಾರ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನಮ್ಮ ನಾಯಕರಾದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಗಟ್ಟಿಯಾಗಿದ್ದಾರೆ. ನಮ್ಮ ಪಕ್ಷದಲ್ಲಿ ಹೈಕಮಾಂಡ್ ಎನ್ನುವುದು ಇದೆ. ಶಿಸ್ತು ಎನ್ನುವುದೂ ಇದೆ. ನಾನು ಕೂಡ ಪಕ್ಷದ ಶಿಸ್ತಿನ ಸಿಪಾಯಿ, ಇಂಥ ವಿಚಾರಗಳನ್ನು ಹೈಕಮಾಂಡ್ ತೀರ್ಮಾನಿಸುತ್ತದೆ. ನಮ್ಮ ಪಕ್ಷದ ೧೩೫ ಶಾಸಕರು ತೀರ್ಮಾನಿಸುತ್ತಾರೆ ಎಂದು ಸಚಿವರು ಹೇಳಿದರು.

ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುವವರೆಗೆ, ಆಯ್ಕೆಯಾದ ಶಾಸಕರು ತೀರ್ಮಾನ ತೆಗೆದುಕೊಳ್ಳುವವರೆಗೆ ಸಿಎಂ ಸ್ಥಾನದ ಬದಲಾವಣೆಯ ಪ್ರಶ್ನೆ ಬರುವುದಿಲ್ಲ. ಇಂಥ ವಿಚಾರಗಳನ್ನ ಬೀದಿಯಲ್ಲಿ, ಗಲ್ಲಿಯಲ್ಲಿ ಮಾತನಾಡುವುದು ಸರಿಯಲ್ಲ ಎಂದರು.
ಮುಂದಿನ ಸಿಎಂ ಲಕ್ಷ್ಮೀ ಹೆಬ್ಬಾಳಕರ್ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಬಗ್ಗೆ ಪ್ರಶ್ನಿಸಿದಾಗ, ಅದಕ್ಕೆಲ್ಲಾ ಯಾವುದೇ ಬೆಲೆಯಿಲ್ಲ ಎಂದು ಪ್ರತಿಕ್ರಿಯಿಸಿದರು.

RELATED ARTICLES
- Advertisment -
Google search engine

Most Popular