Sunday, April 20, 2025
Google search engine

Homeರಾಜ್ಯಸುದ್ದಿಜಾಲನಾಗಮಂಗಲದಲ್ಲಿ ಭುಗಿಲೆದ್ದ ಗಲಭೆ: ನಿಷೇಧಾಜ್ಞೆ, ಶಾಲೆ-ಕಾಲೇಜುಗಳಿಗೆ ರಜೆ

ನಾಗಮಂಗಲದಲ್ಲಿ ಭುಗಿಲೆದ್ದ ಗಲಭೆ: ನಿಷೇಧಾಜ್ಞೆ, ಶಾಲೆ-ಕಾಲೇಜುಗಳಿಗೆ ರಜೆ

ಮಂಡ್ಯ: ನಾಗಮಂಗಲ ಪಟ್ಟಣದಲ್ಲಿ ಬದರಿಕೊಪ್ಪಲಿನ ಗಣಪತಿ ಮೆರವಣಿಗೆಯ ವೇಳೆ ಹಿಂದೂ ಮತ್ತು ಮುಸ್ಲಿಂ ಯುವಕರ ನಡುವೆ ಮಾತಿನ ಚಕಮಕಿ ನಡೆದಿದ್ದು, ಗಲಾಟೆ ತಾರಕ್ಕೇರಿದೆ.

ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದಲ್ಲದೆ ಹಲವು ಅಂಗಡಿಗಳು, ಅಂಗಡಿ ಮುಂದೆ ನಿಲ್ಲಿಸಿದ್ದ ಬೈಕ್ ಗಳಿಗೆ ಬೆಂಕಿ ಹಚ್ಚಿದ್ದರು.
ಬೆಂಕಿ ಹಚ್ಚಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಎರಡು ಸಮುದಾಯದ ೨೮ ಮಂದಿಯನ್ನು ಬಂಧಿಸಿ ಠಾಣೆಗೆ ಕರೆತಂದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಘಟನೆಯ ಬಳಿಕ ಮಂಡ್ಯದ ನಾಗಮಂಗಲದ ಬದರಿಕೊಪ್ಪಲಿನಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಪಟ್ಟಣದಲ್ಲಿ ಸೆಕ್ಷನ್ ೧೪೪ ಜಾರಿ ಮಾಡಲಾಗಿದೆ.
ಮುಂಜಾಗ್ರತಾ ಕ್ರಮವಾಗಿ ಇಂದು ನಾಗಮಂಗಲದಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇನ್ನು ಘಟನೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಸಂಘಟನೆ ಇಂದು ನಾಗಮಂಗಲ ಬಂದ್‌ಗೆ ಕರೆ ಕೊಟ್ಟಿದೆ.

RELATED ARTICLES
- Advertisment -
Google search engine

Most Popular