ಮಂಗಳೂರು (ದಕ್ಷಿಣ ಕನ್ನಡ): ಮಂದಗತಿಯಿಂದ ಸಾಗುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯ ವಿರುದ್ಧ ಎಸ್.ಡಿ.ಪಿ.ಐ ಪಕ್ಷದ ವತಿಯಿಂದ ಇಂದು ಬಿಸಿರೋಡ್ ಹಾಗೂ ಬೆಳ್ತಂಗಡಿಯ ಮೂರುಮಾರ್ಗದ ಬಳಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಯಿತು.
ಕ್ಷೇತ್ರ ಸಮಿತಿ ಸದಸ್ಯರಾದ ನವಾಝ್ ಕಟ್ಟೆ ಮಾತನಾಡಿ, ಪುಂಜಾಲಕಟ್ಟೆ ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯ ಆರಂಭಗೊಂಡು ವರ್ಷಗಳೇ ಕಳೆದ್ರೂ ಇನ್ನು ಕಾಮಗಾರಿ ಪೂರ್ಣಗೊಳ್ಳದೆ ದಿನ ನಿತ್ಯ ಅಫಘಾತಗಳು ಸಂಭವಿಸುತ್ತಿವೆ.
ವಾಹನ ಚಾಲಕರು ಜೀವ ಕೈಯಲ್ಲಿ ಹಿಡಿದು ಸಂಚರಿಸುವಂತಾಗಿದೆ. ಚಿಕ್ಕಮಗಳೂರು ಮತ್ತು ದ. ಕ ಜಿಲ್ಲೆಯ ಸಂಪರ್ಕ ರಸ್ತೆಯಾಗಿರುದರಿಂದ ನಿತ್ಯ ಸಾವಿರಾರು ವಾಹನಗಳು ಮೂಲಕ ಸಂಚರಿಸುತ್ತವೆ. ಹದಗೆಟ್ಟ ರಸ್ತೆಯಿಂದ ರಾಜ್ಯ ಸಾರಿಗೆ ಬಸ್‌ಗಳನ್ನು ಕಡಿಮೆಗೊಳಿಸಲಾಗಿದೆ ಎಂದರು.