ಮಂಡ್ಯ : ಗಣೇಶೋತ್ಸವ ಮೆರವಣಿಗೆ ವೇಳೆ ಗಲಭೆ ನಡೆದ ನಾಗಮಂಗಲಕ್ಕೆ ಇಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಭೇಟಿ ನೀಡಲು ನಿರ್ಧರಿಸಿದ್ದರು. ಆದರೆ ಪೊಲೀಸರು ಅವರಿಗೆ ನಾಗಮಂಗಲ ಭೇಟಿಗೆ ನಿಷೇಧ ವಿಧಿಸಿದ್ದಾರೆ.
ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆಯಲ್ಲಿ ನಡೆದ ಗಲಾಟೆಯಲ್ಲಿ ಹಲವಾರು ಅಂಗಡಿಗಳು ಸುಟ್ಟು ಭಸ್ಮವಾಗಿದ್ದು, ಇಂದು ಶುಕ್ರವಾರ ಈ ಸ್ಥಳಕ್ಕೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಭೇಟಿ ನೀಡಲು ನಿರ್ಧರಿಸಿದ್ದರು. ಆದರೆ ಪೊಲೀಸರು ಪ್ರಮೋದ್ ಮುತಾಲಿಕ್ ನಾಗಮಂಗಲ ಭೇಟಿಗೆ ನಿಷೇಧ ಹೇರಿದ್ದಾರೆ.
ನಾಗಮಂಗಲದಲ್ಲಿ ಸದ್ಯ ಪರಿಸ್ಥಿತಿ ಹತೋಟಿಗೆ ಬಂದಿದೆ. ಅಂಗಡಿಗಳು ಓಪನ್ ಆಗುತ್ತಿವೆ. ಪರಿಸ್ಥಿತಿ ಯಥಾಸ್ಥಿತಿಗೆ ಮರಳುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ. ಈವರೆಗೆ ೧೫೦ ಆರೋಪಿಗಳ ವಿರುದ್ಧ ಎಫ್ ಐಆರ್ ದಾಖಲಾಗಿದ್ದು, ೫೨ ಮಂದಿಯನ್ನು ಅರೆಸ್ಟ್ ಮಾಡಲಾಗಿದೆ ಎಂದು ಮಂಡ್ಯ ಎಸ್ ಪಿ ಮಲ್ಲಿಕಾರ್ಜುನ್ ಮಾಹಿತಿ ನೀಡಿದ್ದಾರೆ.