ವರದಿ :ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ: ತಾಲ್ಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಆಡಳಿತ ಮಂಡಳಿ ನಿರ್ದೇಶಕ ಸ್ಥಾನಗಳಿಗೆ ಕಾನೂನು ಬಾಹಿರವಾಗಿ ಚುನಾವಣೆ ನಡೆಸಲು ಆಡಳಿತ ಮಂಡಳಿ ಮುಂದಾಗಿದ್ದು, ಕೂಡಲೇ ಸ್ಥಗಿತಗೊಳಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬ್ಯಾಂಕ್ ನಿರ್ದೇಶಕ ಹರಿಚಿದಂಬರ ಒತ್ತಾಯಿಸಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಹಕಾರಿ ನಿಯಮಗಳ ಪ್ರಕಾರ ಹಾಲಿ ಆಡಳಿತ ಮಂಡಳಿಯ ಅವಧಿ ಮುಗಿಯುವ 6 ತಿಂಗಳ ಮೊದಲೇ ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ಪ್ರಕ್ರಿಯೆ ನಡೆಸಬೇಕಾಗುತ್ತದೆ. ಚುನಾವಣಾ ಪ್ರಕ್ರಿಯೆ ಆದರೆ ತಡವಾಗಿ ಪ್ರಾರಂಭಿಸಿ ఒంటి ನಿಬಂಧಕರ ಅನುಮತಿ ಕೋರಿರುವುದು ಕಾನೂನು ಬಾಹಿರವಾಗಿದೆ ಎಂದು ಆರೋಪಿಸಿದರು.
ಚುನಾವಣೆ ನಡೆಯುವ 6ತಿಂಗಳ ಮೊದಲೇ ಬ್ಯಾಂಕ್‌ನಲ್ಲಿ ಯಾವುದೇ ವ್ಯವಹಾರ ಮಾಡದ ಸದಸ್ಯರಿಗೆ ಅನರ್ಹರೆಂದು ನೋಟಿಸ್ ನೀಡಬೇಕು. ಆದರೆ ಜು.12 ಎಂದು ಹಳೆಯ ದಿನಾಂಕ ನಮೂದಿಸಿ ಆ.16ರಂದು ತಡವಾಗಿ ನೋಟಿಸ್ ಪೋಸ್ಟ್ ಮಾಡಿದರೆ ಸದಸ್ಯರು ಹೇಗೆ ಮತದಾನದಿಂದ ಅನರ್ಹರಾಗುತ್ತಾರೆ ಎಂದು ಪ್ರಶ್ನಿಸಿದ ಅವರು, ఒంటి ನಿಬಂಧಕರಿಂದ ಕರಡು ಮತದಾರರ ಪಟ್ಟಿಗೂ ಇಲ್ಲಿ ಅನುಮೋದನೆ ಪಡೆಯಲಾಗಿಲ್ಲ ಎಂದು ಆರೋಪಿಸಿದರು.
ನಿಯಮ ಉಲ್ಲಂಘಿಸಿ ಚುನಾವಣೆ ನಡೆಸಲಾಗುತ್ತಿದ್ದು, ಸಂಬಂಧಿಸಿದ ಅಧಿಕಾರಿಗಳು ಈ ಕೂಡಲೇ ಚುನಾವಣಾ ಪ್ರಕ್ರಿಯೆ ಮುಂದೂಡಬೇಕು. ಬ್ಯಾಂಕ್ ಕಾರ್ಯದರ್ಶಿಯನ್ನು ಅಮಾನತುಗೊಳಿಸಬೇಕು, ಆಡಳಿತ ಮಂಡಳಿಯನ್ನು ಸೂಪರ್ ಸೀಡ್ ಗೊಳಿಸಿ ಆಡಳಿತಾಧಿಕಾರಿಗಳನ್ನು ನೇಮಿಸಬೇಕು. ಇಲ್ಲದೇ ಹೋದಲ್ಲಿ ರಾಜ್ಯ ಜೆಡಿಎಸ್ ಕಾರ್ಯಾಧ್ಯಕ್ಷ ಸಾ.ರಾ. ಮಹೇಶ್ ಅವರೊಂದಿಗೆ ಸೇರಿ ಉಗ್ರ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬ್ಯಾಂಕ್ ನಿರ್ದೇಶಕ ಪರಶುರಾಮಯ್ಯ, ಮುಖಂಡ ಲಾಲನಹಳ್ಳಿ ಮಹೇಶ್ ಇದ್ದರು.