Friday, April 18, 2025
Google search engine

Homeರಾಜ್ಯಉತ್ತರಾಖಂಡದಲ್ಲಿ ಭೂಕುಸಿತ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಬಂದ್

ಉತ್ತರಾಖಂಡದಲ್ಲಿ ಭೂಕುಸಿತ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಬಂದ್

ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಭೂಕುಸಿತ ಉಂಟಾಗಿ, ಬದರಿನಾಥ ರಾಷ್ಟ್ರೀಯ ಹೆದ್ದಾರಿಯು ಬಂದ್ ಆಗಿದೆ ಎಂದು ಜಿಲ್ಲಾಡಳಿತ ಇಂದು ಶನಿವಾರ ತಿಳಿಸಿದೆ.

ಭೂಕುಸಿತ ಸಂಭವಿಸಿ ಬೆಟ್ಟಗಳಿಂದ ಕಲ್ಲುಗಳು ಉರುಳಿ ರಸ್ತೆಗಳ ಮೇಲೆ ಬಿದ್ದಿದೆ. ಪರಿಣಾಮ ಲಂಬಗಡ, ನಂದಪ್ರಯಾಗ, ಸೋನಾಳ ಮತ್ತು ಬ್ಯಾರೇಜ್ ಕುಂಜ್‌ನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಕಚೇರಿ ಹೇಳಿದೆ. ಜೊತೆಗೆ ಸಾಕೋಟ್-ನಂದಪ್ರಯಾಗ ನಡುವಿನ ಮಾರ್ಗವನ್ನು ಕೂಡ ನಿರ್ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾಮೇದಾ ಬಳಿಯ ಬದರಿನಾಥ ರಾಷ್ಟ್ರೀಯ ಹೆದ್ದಾರಿಯನ್ನು ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ ಎಂದು ಚಮೋಲಿ ಪೊಲೀಸರು ಮಾಹಿತಿ ನೀಡಿದ್ದಾರೆ.

RELATED ARTICLES
- Advertisment -
Google search engine

Most Popular