Sunday, April 20, 2025
Google search engine

Homeಸಿನಿಮಾಸೇವಾ ಮನೋಭಾವ ಬೆಳೆಸುವ ಸ್ಕೌಟ್ಸ್ ಗೈಡ್ಸ್

ಸೇವಾ ಮನೋಭಾವ ಬೆಳೆಸುವ ಸ್ಕೌಟ್ಸ್ ಗೈಡ್ಸ್


ಮೈಸೂರು: ನೂರು ವರ್ಷಗಳ ಇತಿಹಾಸವಿರುವ ಸ್ಕೌಟ್ಸ್ ಮತ್ತು ಗೈಡ್ಸ್ ಸಮಾಜಮುಖಿ ಕೆಲಸಗಳು ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸಾಮಾಜಿಕ ಸೇವಾ ಮನೋಭಾವ ಹಾಗೂ ಶಿಸ್ತನ್ನು ಬೆಳೆಸುವಲ್ಲಿ ಸಹಕಾರಿಯಾಗುತ್ತದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ನಾಗಮ್ಮ ಹೇಳಿದರು.
ಭಾರತ್ ಸ್ಕೌಟ್ಸ್ ಮತ್ತು ಗೈಟ್ಸ್ ಕರ್ನಾಟಕ ರಾಜ್ಯ ಸಂಸ್ಥೆ ಹಾಗೂ ಜಿಲ್ಲಾ ಸಂಸ್ಥೆ ವತಿಯಿಂದ ವಿದ್ಯಾವರ್ಧಕ ಇಂಜಿನಿಯರಿಂಗ್ ಕಾಲೇಜಿನ ಸಾಹುಕಾರ್ ಚೆನ್ನಯ್ಯ ಸಭಾಂಗಣದಲ್ಲಿ ಮೈಸೂರು ವಿಭಾಗ ಮಟ್ಟದ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ ಬುಧವಾರ ಆಯೋಜಿಸಿದ್ದ ಒಂದು ದಿನದ ಮಾಹಿತಿ ಶಿಬಿರದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಯಮ ಹಾಗೂ ಸೇವಾ ಮನೋಭಾವ ಬೆಳೆಸಲು ಸ್ಕೌಟ್ಸ್ ಮತ್ತು ಗೈಡ್ಸ್ ಸಹಕಾರಿಯಾಗಿದೆ. ವಿದ್ಯಾರ್ಥಿಗಳನ್ನು ಸಮಾಜದಲ್ಲಿ ಉತ್ತಮ ಪ್ರಜೆಗಳನ್ನಾಗಿ ಮಾಡಲು ಉಪನ್ಯಾಸಕರು ಪ್ರಯತ್ನ ಮಾಡಬೇಕು ಎಂದು ತಿಳಿಸಿದರು.
ಸಂಸ್ಥಾಪಕ ಬೇಡನ್ ಪೊವೆಲ್ ಅವರ ಆದರ್ಶ ಮತ್ತು ವಿದ್ಯಾರ್ಥಿಗಳ ವಯಸ್ಸಿಗೆ ಅನುಗುಣವಾಗಿ ವಿಂಗಡಿಸಿರುವ ವಿವಿಧ ವಿಭಾಗಗಳ ಬಗ್ಗೆ ಮಾಹಿತಿ ನೀಡಿದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತ ಪಿ.ವಿಶ್ವನಾಥ್ ಮಾತನಾಡಿ, ೧೫ ರಿಂದ ೨೫ ವಯಸ್ಸಿನ ಯುವಕ ಯುವತಿಯರಿಗೆ ರೋವರ್ಸ್ ಮತ್ತು ರೇಂಜರ್ಸ್ ವಿಭಾಗದ ಧ್ಯೇಯ ಹಾಗೂ ದೊರೆಯುವ ಅವಕಾಶಗಳ ಕುರಿತು ತಿಳಿಸಬೇಕು. ಆ ಮೂಲಕ ಇಂದಿನ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಘಟನೆ ಸೇರುವಲ್ಲಿ ಉಪನ್ಯಾಸಕರು ಕಾರ್ಯ ನಿರ್ವಹಿಸಬೇಕು. ಓದಿನ ಜತೆಗೆ ಸಾಮಾಜಿಕ ಕಳಕಳಿ ಹಾಗೂ ಬದ್ಧತೆ ಬೆಳೆಸಿಕೊಳ್ಳಬೇಕು ಎಂದರು.
ಪದವಿಪೂರ್ವ ಶಿಕ್ಷಣ ಇಲಾಖೆಯ ಸಹಾಯಕ ನಿರ್ದೇಶಕ(ಬೆಂಗಳೂರು) ಗುಬ್ಬಿಗೂಡು ರಮೇಶ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.
ಶಿಬಿರದಲ್ಲಿ ಮೈಸೂರು, ಮಂಡ್ಯ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಂದ ೩೦೦ಕ್ಕೂ ಹೆಚ್ಚು ಉಪನ್ಯಾಸಕರು ಭಾಗವಹಿಸಿದ್ದರು.



RELATED ARTICLES
- Advertisment -
Google search engine

Most Popular