ರಾಮನಗರ: ಸಂವಿಧಾನದ ಮಹತ್ವವನ್ನು ಮತ್ತು ಆಶಯಗಳನ್ನು ಮುಂದಿನ ಪೀಳಿಗೆಗೂ ಉಳಿಸಬೇಕು ಎಂದು ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಅವರು ತಿಳಿಸಿದರು.
ಅವರು ಸೆ. ೧೫ರ ಭಾನುವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಎಲ್ಲ ರೀತಿಯ ಹಕ್ಕು ನೀಡಿದೆ. ಪ್ರಜಾಪ್ರಭುತ್ವವನ್ನು ಬಲಪಡಿಸಲು ಮತ್ತು ಅದರ ಮೌಲ್ಯಗಳು ಮತ್ತು ತತ್ವಗಳನ್ನು ಎತ್ತಿ ಹಿಡಿಯಲು ಈ ದಿನವನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ ಎಂದರು.

ರಾಮನಗರ ಜಿಲ್ಲೆಯಲ್ಲಿ ಶೇಷಗಿರಿಹಳ್ಳಿ ಯಿಂದ ಪ್ರಾರಂಭಗೊಂಡು ಚನ್ನಪಟ್ಟಣ ತಾಲ್ಲೂಕಿನ ಕೋಲೂರು ಗೇಟ್ ಗಡಿಯವರೆಗೆ ಮಾನವ ಸರಪಳಿ ನಿರ್ಮಿಸಲಾಗಿತ್ತು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಶಿವಕುಮಾರ್ ಸಂವಿಧಾನ ಪೀಠಿಕೆಯನ್ನುಭೋಧಿಸಿದರು. ಕಾರ್ಯಕ್ರಮದಲ್ಲಿಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಎನ್. ನಟರಾಜು ಗಾಣಕಲ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುನ ಸಮಿತಿ ಅಧ್ಯಕ್ಷರಾದ ಕೆ. ರಾಜು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿಗ್ವಿಜಯ್ ಬೋಡ್ಕೆ,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ, ಅಪರ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ, ಉಪವಿಭಾಗಧಿಕಾರಿ ಬಿನೋಯ್ ಹಾಗೂಜಿಲ್ಲಾ ಮಟ್ಟದ ಅಧಿಕಾರಿಗಳುಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳು, ವಿವಿಧ ಸಮುದಾಯ ಮುಖಂಡರುಗಳು ಭಾಗವಹಿಸಿದ್ದರು.