Tuesday, April 22, 2025
Google search engine

Homeಸ್ಥಳೀಯಮೈಸೂರು ಜಿಲ್ಲಾ ವಿಶ್ವಕರ್ಮ ಸಂಘದ ವತಿಯಿಂದ ವಿಶ್ವಕರ್ಮ ಜಯಂತಿ ಆಚರಣೆ

ಮೈಸೂರು ಜಿಲ್ಲಾ ವಿಶ್ವಕರ್ಮ ಸಂಘದ ವತಿಯಿಂದ ವಿಶ್ವಕರ್ಮ ಜಯಂತಿ ಆಚರಣೆ

ಮೈಸೂರು: ಜಿಲ್ಲಾ ವಿಶ್ವಕರ್ಮ ಸಂಘ ಹಾಗೂ ವಿಶ್ವಕರ್ಮ ಪತ್ತಿನ ಸಹಕಾರ ಬ್ಯಾಂಕ್ ಹಾಗೂ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ವತಿಯಿಂದ ಚಾಮರಾಜಪುರಂನಲ್ಲಿ ವಿಶ್ವಕರ್ಮ ಜಯಂತಿ ಕಾರ್ಯಕ್ರಮವನ್ನು ಭಗವಾನ್ ವಿಶ್ವಕರ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಸರಳವಾಗಿ ಆಚರಿಸಲಾಯಿತು.


ಈ ಸಂದರ್ಭದಲ್ಲಿ ವಿಶ್ವಕರ್ಮ ಪತ್ತಿನ ಸಹಕಾರ ಬ್ಯಾಂಕ್ ನ ಅಧ್ಯಕ್ಷರಾದ ಜಯರಾಮಚಾರ್ ಮಾತನಾಡಿ ವಿಶ್ವಕರ್ಮ ಜಯಂತಿ ಕಾರ್ಯಕ್ರಮವನ್ನು ನಮ್ಮ ಸಮಾಜಕ್ಕೆ ಸರ್ಕಾರದಿಂದ ಆಚರಣೆ ಮಾಡುವಂತೆ ಆದೇಶ ಮಾಡಿದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರಿಗೆ ಹಾಗೂ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ರಾಜ್ಯಾಧ್ಯಕ್ಷರು ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯರಾದ ಕೆ ಪಿ ನಂಜುಂಡಿ ವಿಶ್ವಕರ್ಮ ರವರಿಗೆ, ಪೂಜ್ಯ ಸ್ವಾಮೀಜಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದರು.

ಮೈಸೂರು ಜಿಲ್ಲಾ ವಿಶ್ವಕರ್ಮ ಸಂಘದ ಜಿಲ್ಲಾಧ್ಯಕ್ಷರಾದ ರಿಷಿ ವಿಶ್ವಕರ್ಮ ಮಾತನಾಡಿ ವಿಶ್ವಕರ್ಮ ಜಯಂತಿಯನ್ನು ಭಾರತ ದೇಶಾದ್ಯಂತ ಹಬ್ಬದ ರೀತಿಯಲ್ಲಿ ನಾವು ಆಚರಣೆ ಮಾಡುತ್ತಿದ್ದು, ಉತ್ತರ ಭಾರತದ ರಾಜ್ಯಗಳಲ್ಲಿ ವಿಶ್ವಕರ್ಮ ಜಯಂತಿಯ ದಿವಸದಂದು ರಜಾ ದಿನವನ್ನಾಗಿ ಘೋಷಣೆ ಮಾಡಿದ್ದಾರೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಶ್ವಕರ್ಮ ಜಯಂತಿಯ ದಿನದಂದು ರಜಾ ದಿನವನ್ನಾಗಿ ಘೋಷಣೆ ಮಾಡಿ, ಕರ್ನಾಟಕ ರಾಜ್ಯ ವಿಶ್ವಕರ್ಮ ಅಭಿವೃದ್ಧಿ ನಿಗಮ ಮಂಡಳಿಗೆ ವಿಶ್ವಕರ್ಮ ಜನಾಂಗದವರನ್ನೇ ಅಧ್ಯಕ್ಷರನ್ನಾಗಿ ಮಾಡಿ, ನಮ್ಮ ಸಂಘಕ್ಕೆ ಸಮುದಾಯ ಭವನ ನಿರ್ಮಾಣ ಮಾಡಲು ಮೈಸೂರಿನಲ್ಲಿ ಒಂದು ಎಕರೆ ಭೂಮಿಯನ್ನು ಮಂಜೂರು ಮಾಡಿ ಸಮುದಾಯ ಭವನ ನಿರ್ಮಿಸಲು ೫ ಕೋಟಿ ಅನುದಾನ ಬಿಡುಗಡೆ ಮಾಡಬೇಕೆಂದು ಈ ಮೂಲಕ ಮನವಿ ಮಾಡಿದರು.

ವಿಶ್ವಕರ್ಮ ಜನಾಂಗ ರಾಜಕೀಯವಾಗಿ ನೇರ ಚುನಾವಣೆಗಳಲ್ಲಿ ಭಾಗವಹಿಸಿ ಸ್ಪರ್ಧಿಸಲು ಸಾಧ್ಯವಿಲ್ಲದ ಕಾರಣ ಸರ್ಕಾರದ ನಾಮನಿರ್ದೇಶಕ ಸ್ಥಾನಗಳನ್ನು ನಮ್ಮ ಸಮಾಜಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕು. ಸರ್ವ ಜನಾಂಗಕ್ಕೂ ಬೇಕಾಗಿರುವ ವಿಶ್ವಕರ್ಮ ಜನಾಂಗವು ಆರ್ಥಿಕವಾಗಿ, ಸಾಮಾಜಿಕವಾಗಿ,ಶೈಕ್ಷಣಿಕವಾಗಿ ಇನ್ನು ಅಭಿವೃದ್ಧಿ ಹೊಂದಬೇಕಾದರೆ ನಮ್ಮಲ್ಲಿ ಹೆಚ್ಚು ವಿದ್ಯಾವಂತರನ್ನಾಗಿ ಮಾಡಿ ನಮ್ಮ ಕುಲಕಸುಬುಗಳನ್ನು ಜೊತೆಯಲ್ಲಿ ಉಳಿಸಿಕೊಂಡು ಬೆಳೆಸಿಕೊಳ್ಳುವ ಮನೋಭಾವನೆಯನ್ನು ನಾವು ಮಾಡಬೇಕು ಎಂದು ಜನಾಂಗಕ್ಕೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ನಗರ ಅಧ್ಯಕ್ಷರಾದ ಸಿದ್ದಾಚಾರ್, ಅಭಿವೃದ್ಧಿ ನಿಗಮದ ಮಾಜಿ ನಿರ್ದೇಶಕರಾದ ಸಿಂಧುಹಳ್ಳಿ ಲೋಕೇಶ್, ಹಿರಿಯರಾದ ಅರಕೇಶ್ವರಚಾರ್ ,ಕಾಳಿಕಾಂಬ ದೇವಸ್ಥಾನ ಕಾರ್ಯದರ್ಶಿಯಾದ ಈಶ್ವರಚಾರ್,ಮಂಜುನಾಥ್ ಸೋಮಶೇಖರ್, ವಿನಾಯಕ ಕಣಗಾಲ್, ಎಸ್ ಎನ್ ರಾಜೇಶ್, ರಾಕೇಶ್, ರಂಗನಾಥ್, ಸುಚೇಂದ್ರ,ಚಕ್ರಪಾಣಿ ಹಾಗೂ ಇನ್ನಿತರರು ಭಾಗವಹಿಸಿದ್ದರು

RELATED ARTICLES
- Advertisment -
Google search engine

Most Popular