ಮಂಗಳೂರು: ಆಪಲ್ ಐಒಎಸ್ ಅಪ್ ಡೇಟ್ ಬಳಿಕ ಮೊಬೈಲ್ ಸ್ಕ್ರೀನ್ ನಲ್ಲಿ ಲೈನ್ ಅಥವಾ ಸ್ಕ್ರೀನ್ ಬ್ಲಾಂಕ್ ಆಗುವ ಸಮಸ್ಯೆಯಿಂದ ಗ್ರಾಹಕರು ತೊಂದರೆ ಅನುಭವಿಸುತ್ತಿದ್ದ, ಅದನ್ನು ಬಗೆಹರಿಸುವಂತೆ ಒತ್ತಾಯಿಸಿ ಮೊಬೈಲ್ ರೀಟೇಲರ್ಸ್ ಗಳು ಮಂಗಳವಾರ ಪ್ರತಿಭಟನೆ ನಡೆಸಿದರು.
ಅಂಬೇಡ್ಕರ್ ಸರ್ಕಲ್ ನಿಂದ ಆಪಲ್‌ನ ಸರ್ವಿಸ್ ಸೆಂಟರ್ ಮ್ಯಾಪಲ್ ನ ಎದುರುಗಡೆಯಿಂದ ಕ್ಲಾಕ್ ಟವರ್ ವರಗೆ ಮೆರವಣಿಗೆಯಲ್ಲಿ ಸಾಗಿಬಂದ ಪ್ರತಿಭಟನಾಕಾರರು ಕ್ಲಾಕ್ ಟವರ್ ಬಳಿ ತಮ್ಮ ಬೇಡಿಕೆಗಳನ್ನು ಕೂಡಲೇ ಪೂರೈಸುವಂತೆ ಸಂಸ್ಥೆಯನ್ನು ಆಗ್ರಹಿಸಿದರು.
ಈ ವೇಳೆ ಮಾತನಾಡಿದ ದಕ್ಷಿಣ ಕನ್ನಡ ಮತ್ತು ಉಡುಪಿ ಮೊಬೈಲ್ ರಿಟೇಲರ್ಸ್ ಅಸೋಸಿಯೇಷನ್ ಸಂಘಟನೆಯ ರಾಜ್ಯ ಸುದ್ದಿ ಮತ್ತು ಮಾಧ್ಯಮ ನಿರ್ವಾಹಕ ವಿವೇಕ್ ಜಿ ಸುವರ್ಣ, ಇದೇ ಮೊದಲ ಬಾರಿಗೆ ಸ್ಥಳೀಯ ರೀಟೇಲರ್ ಗಳು ತಮ್ಮ ಗ್ರಾಹಕರಿಗೋಸ್ಕರ ಬೀದಿಗೆ ಇಳಿದು ಪ್ರತಿಭಟಿಸುತ್ತಿದ್ದಾರೆ. ಇದರಲ್ಲಿ ಹಲವು ನೊಂದ ಗ್ರಾಹಕರು ಪಾಲ್ಗೊಳ್ಳುತ್ತಿದ್ದಾರೆ. ಕಂಪೆನಿ ಸ್ಪಂದಿಸದೆ ಇದ್ದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದ್ದೇವೆ ಎಂದರು.