Monday, April 21, 2025
Google search engine

Homeರಾಜ್ಯಸುದ್ದಿಜಾಲಸಿಎಂ ವಿರುದ್ಧ ಅಕ್ಷೆಪಾರ್ಹ ಪೋಸ್ಟ್ ಪ್ರಕರಣ : ಶಾಸಕ ಹರೀಶ್ ಪೂಂಜಾ ವಿರುದ್ಧ ಚಾರ್ಜ್ ಶೀಟ್...

ಸಿಎಂ ವಿರುದ್ಧ ಅಕ್ಷೆಪಾರ್ಹ ಪೋಸ್ಟ್ ಪ್ರಕರಣ : ಶಾಸಕ ಹರೀಶ್ ಪೂಂಜಾ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

ಮಂಗಳೂರು (ದಕ್ಷಿಣ ಕನ್ನಡ) : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಲೆಕ್ಷನ್ ಮಾಸ್ಟರ್ ಎಂದು ಪೋಸ್ಟ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸರು ಶಾಸಕ ಹರೀಶ್ ಪೂಂಜ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಅವಮಾನ ಅಗುವ ರೀತಿಯಲ್ಲಿ ನಿವಾಸದ ಫೋಟೋ ಮತ್ತು ಕಚೇರಿಯಲ್ಲಿ ಕುಳಿತಿರುವ ಫೋಟೋಗಳನ್ನು ಬಳಸಿ ಅದನ್ನು ಎಡಿಟ್ ಮಾಡಿ ಸಿದ್ದರಾಮಯ್ಯ ಕಲೆಕ್ಟರ್ ಮಾಸ್ಟರ್ (ಅಒ) ಎಂದು ಹಾಕಿರುವ ಬಗ್ಗೆ ಬೆಳ್ತಂಗಡಿ ಕಾಂಗ್ರೆಸ್ ಮುಖಂಡ ಶೇಖರ್ ಕುಕ್ಕೇಡಿ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಬೆಳ್ತಂಗಡಿ ಪೊಲೀಸರು ೨೬/೧೦/೨೦೨೩ ರಂದು IPಅ ೧೮೬೦(U/s-೫೦೪,೫೦೫(೨)) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು.

ಪ್ರಕರಣದ ಬಗ್ಗೆ ಸಾಮಾಜಿಕ ತಾಣಗಳ ಸಂಸ್ಥೆಗಳಿಂದ ಎಡಿಟ್ ಮಾಡಿದ ಪೋಸ್ಟ್ ಗಳ ವರದಿ ತರಿಸಿಕೊಂಡು ತನಿಖೆ ಮಾಡಿ ಒಂದು ವರ್ಷದ ಬಳಿಕ ಬೆಂಗಳೂರು ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ಬೆಳ್ತಂಗಡಿ ಪೊಲೀಸರು ಸೆ.೧೨ ರಂದು ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ.

RELATED ARTICLES
- Advertisment -
Google search engine

Most Popular