Sunday, April 20, 2025
Google search engine

Homeಸ್ಥಳೀಯರಾಹುಲ್ ಗಾಂಧಿ ಅವರ ಸಂಸದ ಸ್ಥಾನದ ಅನರ್ಹತೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ

ರಾಹುಲ್ ಗಾಂಧಿ ಅವರ ಸಂಸದ ಸ್ಥಾನದ ಅನರ್ಹತೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ


ಚಾಮರಾಜನಗರ : ರಾಹುಲ್ ಗಾಂಧಿಯನ್ನು ಸಂಸದ ಸ್ಥಾನದಿಂದ ರದ್ದುಗೊಳಿಸಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು.
ನಗರದ ಜಿಲ್ಲಾಡಳಿತ ಭವನದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಬಾಯಿಗೆ ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಹನೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಆರ್ ನರೇಂದ್ರ ಅವರು ಮಾತನಾಡಿ,ಕೆಪಿಸಿಸಿ ಅಧ್ಯಕ್ಷರ ಆದೇಶದ ಮೇರೆಗೆ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವುದು ಹಾಗೂ ೨ ವರ್ಷ ಶಿಕ್ಷೆಯಾಗುವ ರೀತಿ ಮಾಡಿರುವುದನ್ನು ನಮ್ಮ ಜಿಲ್ಲಾ ಕಾಂಗ್ರೆಸ್ ಸಮಿತಿಯು ಖಂಡಿಸುತ್ತದೆ.ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಆಡಳಿತವು ಪದೇಪದೇ ವಿರೋಧ ಪಕ್ಷಗಳನ್ನು ಕಡೆಗಣಿಸುತ್ತಾ ಬಂದಿದೆ.ಅಲ್ಲದೆ ವಿರೋಧ ಪಕ್ಷದ ಮುಖಂಡರಿಗೆ ಪದೇ ಪದೇ ಈ ರೀತಿ ತೊಂದರೆ ಕೊಡುತ್ತಾ ಬರುತ್ತಾ ಇದೆ.ಇದು ಪ್ರಜಾಪ್ರಭುತ್ವಕ್ಕೆ ಅನ್ಯಾಯ ಮಾಡಿದಂತಾಗುತ್ತದೆ. ಆದ್ದರಿಂದ ನಮ್ಮ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿರುವ ವಿರುದ್ಧ ನಾವು ಮೌನ ಪ್ರತಿಭಟನೆ ಮಾಡುತ್ತಿದ್ದೇವೆ.ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದು ಕೆಲವೇ ತಿಂಗಳುಗಳು ಆಗಿಲ್ಲ ಆದರೆ ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಅವರ ಅಭಿವೃದ್ಧಿ ಕೆಲಸವೂ ಅಪೂರ್ಣ. ಯಾವುದೋ ಕಾರಣದಿಂದ ಈ ರೀತಿ ಮಾಡುತ್ತಿದ್ದಾರೋ ನಮಗೆ ಗೊತ್ತಿಲ್ಲ. ಆದರೆ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನಕ್ಕೆ ಮತ್ತೆ ಅವಕಾಶ ಕೊಡಬೇಕು ಇಲ್ಲವಾದಲ್ಲಿ ಇದು ದ್ವೇಷ ರಾಜಕಾರಣವಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಮಾಜಿ ಸಂಸದ ಕಾಗಲವಾಡಿ ಶಿವಣ್ಣ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ,ಉಪಾಧ್ಯಕ್ಷ ಬಿ.ಕೆ.ರವಿಕುಮಾರ್,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುನ್ನಾ ಸೇರಿದಂತೆ ಇತರರು ಭಾಗವಹಿಸಿದ್ದರು.

RELATED ARTICLES
- Advertisment -
Google search engine

Most Popular