Sunday, April 20, 2025
Google search engine

Homeರಾಜ್ಯಸುದ್ದಿಜಾಲಮಹಿಳೆಯರು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘದಿಂದ ಹೊರಬಂದು ಸಂಜೀವಿನಿ ಒಕ್ಕೂಟ ಸೇರಲು ಶಾಸಕ ಪಿ.ಎಂ. ನರೇಂದ್ರಸ್ವಾಮಿ ಕರೆ

ಮಹಿಳೆಯರು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘದಿಂದ ಹೊರಬಂದು ಸಂಜೀವಿನಿ ಒಕ್ಕೂಟ ಸೇರಲು ಶಾಸಕ ಪಿ.ಎಂ. ನರೇಂದ್ರಸ್ವಾಮಿ ಕರೆ

ಮಂಡ್ಯ: ಮಹಿಳೆಯರು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘದಿಂದ ಹೊರಬಂದು ಸರ್ಕಾರದಿಂದ ರಚನೆಯಾದ ಸಂಜೀವಿನಿ ಒಕ್ಕೂಟ ಸೇರುವಂತೆ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಹೇಳಿದರು.

ಮಂಡ್ಯ ಜಿಲ್ಲೆಯ ಹಲಗೂರು ಸಮೀಪದ ಹಾಡ್ಲಿ ಗ್ರಾಮದಲ್ಲಿ ೧೦ ಲಕ್ಷ ರೂಪಾಯಿ ವೆಚ್ಚದಲ್ಲಿ ನೂತನ ಗ್ರಾಪಂ ಕಚೇರಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಶಾಸಕರು ಮಾತನಾಡಿ, ಮಹಿಳೆಯರು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘದಿಂದ ಹೊರಬಂದು ಸರ್ಕಾರದಿಂದ ರಚನೆಯಾದ ಸಂಜೀವಿನಿ ಒಕ್ಕೂಟ ಸೇರುವ ಮೂಲಕ ಗ್ರಾಮದಲ್ಲಿ ಆರ್ಥಿಕ ಚಟುವಟಿಕೆ ಆರಂಭಿಸಿ ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಬೇಕು ಎಂದು ಹೇಳಿದ್ದಾರೆ.

ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘವು ಮಹಿಳಾ ಸಂಘಗಳಿಗೆ ತ್ವರಿತಗತಿಯಲ್ಲಿ ಸಾಲ ನೀಡಿ ಅತಿ ಹೆಚ್ಚು ಬಡ್ಡಿ ವಸೂಲಿ ಮಾಡುವ ಮೂಲಕ ಬಡ ಜನರನ್ನು ಶೋಷಣೆ ಮಾಡಲು ಹೊರಟಿದೆ. ಧರ್ಮದ ಕಾರ್ಯ ಮಾಡುತ್ತಿಲ್ಲ. ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಬಡವರು, ಮಹಿಳೆಯರ ಪರವಾಗಿದ್ದು, ಎಲ್ಲಾ ವರ್ಗದವರ ಶ್ರೇಯೋಭಿವೃದ್ಧಿಗೆ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ. ಶಾಸಕರು ಮಾತನಾಡಿದ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ.

RELATED ARTICLES
- Advertisment -
Google search engine

Most Popular