Saturday, April 19, 2025
Google search engine

Homeರಾಜ್ಯಸಂಗೊಳ್ಳಿ ರಾಯಣ್ಣನ ಹೆಸರು ಹೇಳಲೂ ಸಿಎಂ ಸಿದ್ದರಾಮಯ್ಯರಿಗೆ ನೈತಿಕತೆ ಇಲ್ಲ: ರವಿಕುಮಾರ್

ಸಂಗೊಳ್ಳಿ ರಾಯಣ್ಣನ ಹೆಸರು ಹೇಳಲೂ ಸಿಎಂ ಸಿದ್ದರಾಮಯ್ಯರಿಗೆ ನೈತಿಕತೆ ಇಲ್ಲ: ರವಿಕುಮಾರ್

ಬೆಂಗಳೂರು: ಸಂಗೊಳ್ಳಿ ರಾಯಣ್ಣನಿಗೆ ಮತ್ತು ಸಿದ್ದರಾಮಯ್ಯನವರಿಗೆ ಎತ್ತಣದೆತ್ತಣ ಸಂಬಂಧ ಸಂಗೊಳ್ಳಿ ರಾಯಣ್ಣನ ಹೆಸರು ಹೇಳಲೂ ಸಿದ್ದರಾಮಯ್ಯನವರಿಗೆ ನೈತಿಕತೆ ಇಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ತಿಳಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸಂಗೊಳ್ಳಿ ರಾಯಣ್ಣ ಒಬ್ಬ ಮಹಾನ್ ಸೈನಿಕ. ನಮ್ಮ ರಾಜ್ಯದ ಉಳಿವಿಗಾಗಿ, ಕಿತ್ತೂರು ಕರ್ನಾಟಕದ ಉಳಿವಿಗೆ, ಕಿತ್ತೂರು ರಾಣಿ ಚನ್ನಮ್ಮನ ದಂಡನಾಯಕನಾಗಿ ಕೆಲಸ ಮಾಡಿದ್ದವರು. ಸಂಗೊಳ್ಳಿ ರಾಯಣ್ಣ ೧೪ ನಿವೇಶನ ಪಡೆದಿರಲಿಲ್ಲ. ೩ ಎಕರೆ ೧೬ ಗುಂಟೆ ಜಮೀನು ತೆಗೆದುಕೊಂಡಿಲ್ಲ. ಏನೇನೂ ಆಸೆ ಇಲ್ಲದೆ, ಸ್ವಾರ್ಥ ಇಲ್ಲದೆ ರಾಜ್ಯಕ್ಕೋಸ್ಕರ ನಿಸ್ವಾರ್ಥ ಹೋರಾಟ ಮಾಡಿ ಬಲಿದಾನ ಮಾಡಿ, ನಾಡಿಗೆ ಕೀರ್ತಿ ತಂದ ವ್ಯಕ್ತಿ ಸಂಗೊಳ್ಳಿ ರಾಯಣ್ಣ ಎಂದು ಹೇಳಿದರು.

ಸಿದ್ದರಾಮಯ್ಯನವರು ತಮ್ಮ ಹೇಳಿಕೆ ಸಂಬಂಧ ನಾಡಿನ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.ಸಿದ್ದರಾಮಯ್ಯರಂತೆ ಸಂಗೊಳ್ಳಿ ರಾಯಣ್ಣ ಹತ್ತಾರು ಸೈಟ್ ಪಡೆದಿರಲಿಲ್ಲ. ಒಂದೆಕರೆ ಜಮೀನನ್ನೂ ತೆಗೆದುಕೊಂಡಿಲ್ಲ. ಸಂಗೊಳ್ಳಿ ರಾಯಣ್ಣನ ವಂಶಸ್ಥರು ಇದ್ದರೆ ಅವರು ಬಲಿದಾನಕ್ಕಾಗಿ ನೀವೇನಾದರೂ ಕೊಡಿ ಎಂದು ಸರಕಾರಕ್ಕೆ ಮನವಿಯನ್ನೇನೂ ಕೊಟ್ಟವರಲ್ಲ. ಆದ್ದರಿಂದ ಸಂಗೊಳ್ಳಿ ರಾಯಣ್ಣನ ಹೆಸರು ಹೇಳಲೂ ಸಿದ್ದರಾಮಯ್ಯನವರಿಗೆ ನೈತಿಕತೆ ಇಲ್ಲ ಎಂದು ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಂಗೊಳ್ಳಿ ರಾಯಣ್ಣನ ಕುರಿತು ಮಾತನಾಡಿದ್ದಾರೆ. ಸಂಗೊಳ್ಳಿ ರಾಯಣ್ಣನಿಗೆ ದ್ರೋಹ ಆದ ಮಾದರಿಯಲ್ಲೇ ತಮಗೂ ದ್ರೋಹ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಸಿದ್ದರಾಮಯ್ಯನವರನ್ನು ಬಲಿ ಕೊಡುವವರು ಯಾರು ಅವರ ಹೆಸರು ಏನು ಬಹಿರಂಗಪಡಿಸಲಿ ಎಂದು ಸವಾಲು ಹಾಕಿದರು.

RELATED ARTICLES
- Advertisment -
Google search engine

Most Popular