ಮಂಡ್ಯ: ಇಲಾಖಾ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಿಸಿದಂತೆ ಕಾರ್ಯಯೋಜನೆ ರೂಪಿಸಿ, ೨೦೨೩-೨೪ ನೇ ಸಾಲಿನ ಅನುದಾನ ನಿಗಧಿಯಾಗಿರುತ್ತದೆ. ಕೆಲಸಗಳನ್ನು ಪಾರದರ್ಶಕವಾಗಿ ನಿರ್ವಹಿಸಿ ಎಂದು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ: ಪಿ.ಸಿ ಜಾಫರ್ ಅವರು ತಿಳಿಸಿದರು.
ಅವರು ಇಂದು ಬೆಂಗಳೂರಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಸಾಮಾನ್ಯ ಸಭೆ ನಡೆಸಿ ಮಾತನಾಡಿದರು. ಇಲಾಖೆಯ ಮುಖ್ಯಸ್ಥರು ಕಾಮಗಾರಿಗಳನ್ನು ನಡೆಸುವಾಗ ಸರ್ಕಾರದ ನಿಯಮಗಳನ್ನು ಪಾಲಿಸಬೇಕು. ಜಿಲ್ಲಾ ಪಂಚಾಯತ್ ಅನುದಾನದ ಟೆಂಡರ್ ಮಾಡುವಾಗ ಕಡತಗಳನ್ನು ಉಪಕಾರ್ಯದರ್ಶಿಗಳಿಂದ ಅನುಮೋದನೆ ಪಡೆಯಲು ತಿಳಿಸಿದರು.
ಜಿಲ್ಲೆಯಲ್ಲಿ ಕಡಿಮೆ ಅನುದಾನದಿಂದ ಕೆಲವು ಸಣ್ಣ ದುರಸ್ತಿ ಕಾಮಗಾರಿ, ಯೋಜನೆ ಕೈಗೊಂಡರೆ ಸಾರ್ವಜನಿಕರಿಗೆ ಹೆಚ್ಚು ಉಪಯುಕ್ತತೆಯಾಗುವ ಸಾಧ್ಯತೆ ಇರುತ್ತದೆ. ಅವುಗಳನ್ನು ಪಟ್ಟಿ ಮಾಡಿ ಚರ್ಚಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸೀಫ್, ಉಪಕಾರ್ಯದರ್ಶಿ ಸಂಜೀವಪ್ಪ, ಬಾಬು, ಮುಖ್ಯ ಯೋಜನಾಧಿಕಾರಿ ಧನುಷ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು