Monday, April 21, 2025
Google search engine

Homeಅಪರಾಧಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

ಬೆಂಗಳೂರು: ಗುತ್ತಿಗೆದಾರನಿಗೆ ಜೀವ ಬೆದರಿಕೆ ಮತ್ತು ಜಾತಿನಿಂದನೆ ಮಾಡಿರುವ ಕೇಸ್‌ನಲ್ಲಿ ಬಿಜೆಪಿ ಶಾಸಕ ಮುನಿರತ್ನ ಅವರು ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಇದೀಗ ಇದರ ನಡುವೆ ಮುನಿರತ್ನಗೆ ಮತ್ತೊಂದು ಕಂಟಕ ಎದುರಾಗಿದೆ. ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಬೆಂಗಳೂರು ಮೂಲದ ಮಹಿಳೆ ಮುನಿರತ್ನ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿ ದೂರು ದಾಖಲಿಸಿದ್ದಾರೆ.

ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪದಡಿ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಡಿವೈಎಸ್‌ಪಿ ದಿನಕರ್ ಶೆಟ್ಟಿ ಸಮ್ಮುಖದಲ್ಲಿ ಹಾಜರಾಗಿ ಸಂತ್ರಸ್ತೆ ೨ ಗಂಟೆಗೂ ಹೆಚ್ಚು ಕಾಲ ವಿವರಣೆ ನೀಡಿದ್ದಾರೆ. ಇಂದು ಸಂತ್ರಸ್ತೆ ಜೊತೆ ಪೊಲೀಸರು ಸ್ಥಳಮಹಜರು ನಡೆಸಲಿದ್ದಾರೆ. ಘಟನೆ ಸಂಬಂಧ ಶಾಸಕ ಮುನಿರತ್ನ ಸೇರಿ ೭ ಜನರ ವಿರುದ್ಧ FIR ದಾಖಲಾಗಿದೆ.354 a, 354 c, 376(2), 308, 406, 384, 120b 504, 506, 149 IPC ಸೆಕ್ಷನ್ ಅಡಿ ಕೇಸ್ ದಾಖಲಾಗಿದೆ.

ವಿಚಾರಣಾಧೀನ ಕೈದಿಯಾಗಿರೋ ಮುನಿರತ್ನಗೆ ಗುತ್ತಿಗೆದಾರ ಚಲುವರಾಜು ದಾಖಲಿಸಿದ್ದ ವಂಚನೆ ಪ್ರಕರಣದಲ್ಲಿ ರಿಲೀಫ್ ಸಿಕ್ಕಿದೆ. ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಆದ್ರೆ ಜಾತಿ ನಿಂದನೆ ಕೇಸ್‌ನಲ್ಲಿ ಬಿಜೆಪಿ ಶಾಸಕ ಮುನಿರತ್ನ ಸಲ್ಲಿಸಿರುವ ಜಾಮೀನು ಅರ್ಜಿ ಭವಿಷ್ಯ ಇಂದು ನಿರ್ಧಾರವಾಗಲಿದೆ.

RELATED ARTICLES
- Advertisment -
Google search engine

Most Popular