ನವದೆಹಲಿ: ದೆಹಲಿಯ ನಿಯೋಜಿತ ಮುಖ್ಯಮಂತ್ರಿ ಅತಿಶಿ ಮತ್ತು ಅವರ ಐವರು ಕ್ಯಾಬಿನೆಟ್ ಮಂತ್ರಿಗಳು ಸೆಪ್ಟೆಂಬರ್ ೨೧ ರಂದು ಪ್ರಮಾಣವಚನ ಸ್ವೀಕರಿಸಲಿದೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಇಂದು ಗುರುವಾರ ತಿಳಿಸಿದೆ.
ಎಎಪಿ ನಾಯಕ ಮುಖೇಶ್ ಅಹ್ಲಾವತ್ ದೆಹಲಿ ಕ್ಯಾಬಿನೆಟ್ನಲ್ಲಿ ಹೊಸ ಮುಖವಾಗಲಿದ್ದು, ಗೋಪಾಲ್ ರಾಯ್, ಕೈಲಾಶ್ ಗೆಹ್ಲೋಟ್, ಸೌರಭ್ ಭಾರದ್ವಾಜ್ ಮತ್ತು ಇಮ್ರಾನ್ ಹುಸೇನ್ ಅವರನ್ನು ಕ್ಯಾಬಿನೆಟ್ ಸಚಿವರಾಗಿ ಉಳಿಸಿಕೊಳ್ಳಲಾಗಿದೆ. ನಿಯೋಜಿತ ಮುಖ್ಯಮಂತ್ರಿ ಅತಿಶಿ ಸೆಪ್ಟೆಂಬರ್ ೨೧ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಅರವಿಂದ್ ಕೇಜ್ರಿವಾಲ್ ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು, ನಂತರ ಅತಿಶಿ ರಾಷ್ಟ್ರ ರಾಜಧಾನಿಯಲ್ಲಿ ಹೊಸ ಸರ್ಕಾರ ರಚಿಸಲು ಹಕ್ಕು ಮಂಡಿಸಿದರು.