Monday, April 21, 2025
Google search engine

Homeರಾಜ್ಯಬಿಜೆಪಿ ಸಂಸದರು, ಶಾಸಕರ ಮೇಲೆ ನಿರಂತರ ಎಫ್ ಐಆರ್: ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ: ಶೋಭಾ...

ಬಿಜೆಪಿ ಸಂಸದರು, ಶಾಸಕರ ಮೇಲೆ ನಿರಂತರ ಎಫ್ ಐಆರ್: ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ: ಶೋಭಾ ಕರಂದ್ಲಾಜೆ ಆಕ್ರೋಶ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂದು ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ ಅವರು ಆಕ್ಷೇಪಿಸಿದರು.

ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಶಾಸಕರಾದ ಹರೀಶ್ ಪೂಂಜ, ತೇಜಸ್ವಿ ಸೂರ್ಯ ಸೇರಿದಂತೆ ಅನೇಕ ಶಾಸಕ, ಸಂಸದರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಹಾಗೆಂದು ಕಾಂಗ್ರೆಸ್ ನಾಯಕ ಐವನ್ ಡಿಸೋಜಾ ನೀಡಿದ ಹೇಳಿಕೆ ಮೇಲೆ ಕ್ರಮ ಆಗಲಿಲ್ಲ ಎಂದರು.

ಪೊಲೀಸ್ ಅಧಿಕಾರಿ ಪರಶುರಾಮ ಆತ್ಮಹತ್ಯೆ ಮಾಡಿಕೊಂಡಿದ್ದರೂ ಕಾಂಗ್ರೆಸ್ ಶಾಸಕರ ಮೇಲೆ ಕ್ರಮ ಆಗಲಿಲ್ಲ. ಮಾಜಿ ಸಚಿವ ನಾಗೇಂದ್ರ ಹಗರಣದಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ. ಆದರೆ ಎಸ್ ಐಟಿ ಚಾರ್ಜ್ ಶೀಟ್ ನಲ್ಲಿ ಅವರ ಹೆಸರೇ ಇಲ್ಲ. ರಾಜ್ಯವನ್ನು ಏನು ಮಾಡಲು ಹೊರಟಿದ್ದೀರಿ ಸಿದ್ದರಾಮಯ್ಯನವರೇ ಎಂದು ಶೋಭಾ ಪ್ರಶ್ನಿಸಿದರು.

ಗಣೇಶ ಮೂರ್ತಿಯನ್ನೇ ಪೊಲೀಸ್ ವ್ಯಾನ್ನಲ್ಲಿ ಕರೆದುಕೊಂಡು ಹೋದರು. ಇದು ದೇಶದಲ್ಲೇ ಮೊದಲು. ಗಣಪತಿಗೇ ವಿಘ್ನ ಮಾಡಿದರು. ಚಪ್ಪಲಿ ಬಿಸಾಡಿದರು, ಕಲ್ಲು ಎಸೆದರು, ೨೫ ಅಂಗಡಿ ಸುಟ್ಟು ಹಾಕಿದರು. ಅವರಿಗೆ ಎಲ್ಲಿಂದ ಶಕ್ತಿ ಬಂತು ಕೇರಳದವರು ಬಂದಿದ್ದಾರೆ ಎಂದಬುದು ಗೊತ್ತಾಗಿದೆ ಎಂದು ಶೋಭಾ ಆಕ್ರೋಶ ವ್ಯಕ್ತಪಡಿಸಿದರು.

RELATED ARTICLES
- Advertisment -
Google search engine

Most Popular