Wednesday, April 16, 2025
Google search engine

Homeರಾಜ್ಯಸುದ್ದಿಜಾಲನಾಗಮಂಗಲ ಗಲಭೆ ಪ್ರಕರಣ: ಬದ್ರಿಕೊಪ್ಪಲಿಗೆ ಸಚಿವ ಎಚ್.ಡಿ. ಕುಮಾರಸ್ವಾಮಿ ಭೇಟಿ

ನಾಗಮಂಗಲ ಗಲಭೆ ಪ್ರಕರಣ: ಬದ್ರಿಕೊಪ್ಪಲಿಗೆ ಸಚಿವ ಎಚ್.ಡಿ. ಕುಮಾರಸ್ವಾಮಿ ಭೇಟಿ

ನಾಗಮಂಗಲ: ಇತ್ತೀಚೆಗೆ ನಡೆದ ಗಲಭೆ ಪ್ರಕರಣದ ಬಳಿಕ ನಾಗಮಂಗಲದಲ್ಲಿ ಶಾಂತಿ ನೆಲೆಸುತ್ತಿದೆ. ಸಹಜ ವಾತಾವರಣ ಮರು ಸ್ಥಾಪನೆ ಆಗುತ್ತಿದೆ. ಹೀಗಾಗಿ ಯಾರನ್ನೂ ಬಂಧಿಸುವ ಕೆಲಸ ಮಾಡಬಾರದು’ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಪೊಲೀಸರಿಗೆ ನಿರ್ದೇಶನ ನೀಡಿದರು.

ಪಟ್ಟಣದ ಬದ್ರಿಕೊಪ್ಪಲಿಗೆ ಭೇಟಿ ನೀಡಿದ ಸಚಿವರು ಗಣೇಶ ಮೂರ್ತಿ ಗಲಾಟೆ ಹಿನ್ನೆಲೆಯಲ್ಲಿ ತಮ್ಮ ಮಕ್ಕಳ ಬಗ್ಗೆ ಆತಂಕಗೊಂಡಿರುವ ಪೋಷಕರಿಗೆ ಧೈರ್ಯ ತುಂಬಿದರು. ಐಜಿಪಿ ಎಂ.ಬಿ. ಬೋರಲಿಂಗಯ್ಯ ಅವರೊಂದಿಗೆ ಸ್ಥಳದಿಂದಲೇ ದೂರವಾಣಿಯಲ್ಲಿ ಮಾತನಾಡಿದ ಸಚಿವರು, ಪಟ್ಟಣದಲ್ಲಿ ಮೊದಲಿನ ವಾತಾವರಣವೇ ನೆಲೆಸಿದೆ. ಶಾಂತಿ ಸ್ಥಾಪನೆ ಆಗುತ್ತಿದೆ. ಇಂತಹ ಸಂದರ್ಭದಲ್ಲಿ ಯಾರನ್ನಾದರೂ ಬಂಧಿಸುವ ಕೆಲಸ ಆದರೆ, ಮತ್ತೆ ಅಶಾಂತಿ ಉಂಟಾಗುವ ಅಪಾಯವಿದೆ. ಆದ್ದರಿಂದ ಸೂಕ್ಷ್ಮವಾಗಿ ವರ್ತಿಸಿ ಹಾಗೂ ಯಾರನ್ನೂ ಬಂಧಿಸಬೇಡಿ ಎಂದು ಹೇಳಿದರು.

ಯಾವುದೇ ತಪ್ಪು ಮಾಡದೇ ಜೈಲು ಪಾಲಾಗಿರುವ ಅಮಾಯಕರನ್ನು ಬಿಡುಗಡೆ ಮಾಡಿಸುವ ಪ್ರಯತ್ನ ಮಾಡಲಾಗುತ್ತಿದೆ. ಯಾವುದೇ ಕಾರಣಕ್ಕೂ ಅಂಜಬೇಡಿ. ನಿಮ್ಮ ಜೊತೆ ನಾವಿದ್ದೇವೆ ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಹದಿನೇಳಕ್ಕೂ ಹೆಚ್ಚು ಕುಟುಂಬಸ್ಥರಿಗೆ ಹಣಕಾಸು ನೆರವು ನೀಡಿದರು.

ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಮತ್ತು ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಅವರ ವಿರುದ್ಧ ಎಫ್‌ಐಆರ್ ದಾಖಲು ಮಾಡಿದ್ದಾರೆ. ಆ ಎಫ್‌ಐಆರ್ ನೋಡಿದರೆ ಗೊತ್ತಾಗುತ್ತದೆ ಗುಪ್ತದಳದ ವೈಫಲ್ಯ ಆಗಿದೆ ಎಂದು. ಗಲಭೆ ಮಾಡಲು ಪೋಸ್ಟ್ ಮಾಡಿದ್ದಾರೆ ಅಂತಾರೆ. ಇವರ ಎಫ್‌ಐಆರ್ ನೋಡಿದರೆ ನಗು ಬರುತ್ತದೆ. ಗೃಹ ಸಚಿವರು ಎಚ್ಚರಿಕೆ ವಹಿಸಿದ್ದಿದ್ದರೆ ಹೀಗೆ ಆಗುತ್ತಿರಲಿಲ್ಲ ಎಂದರು.

ನಾಗಮಂಗಲದಲ್ಲಿ ಸಂಸದರ ಕೆಲಸ ಏನು ಎಂದು ಸಚಿವ ಚಲುವರಾಯಸ್ವಾಮಿ ಕೇಳಿರುವ ಪ್ರಶ್ನೆಗೆ ಪ್ರತಿಕ್ರಿಯಿಸಿ, `ಸಂಸದರು ಆರಾಮವಾಗಿ ದೆಹಲಿಯಲ್ಲಿ ಇರಬೇಕಾ? ನಾನು ಈ ಕ್ಷೇತ್ರದ ಸಂಸದ. ಜನರು ಕಷ್ಟದಲ್ಲಿ ಇದ್ದಾಗ ನಾನು ಬರಲೇಬೇಕು. ಮಂಡ್ಯದಲ್ಲಿ ಮಾತ್ರ ಪ್ರವಾಸ ಮಾಡಿಲ್ಲ, ಇಡೀ ದೇಶವನ್ನೇ ಸುತ್ತುತ್ತಿದ್ದೇನೆ’ ಎಂದು ತಿರುಗೇಟು ಕೊಟ್ಟರು.

ನಾನು ರಾಜಕೀಯ ಮಾಡಲು ಬಂದಿಲ್ಲ. ನಾನು ಯಾವ ಕುಮ್ಮಕ್ಕು ಕೊಡಲು ಬಂದಿಲ್ಲ. ಗಲಾಟೆಗೆ ಕುಮ್ಮಕ್ಕು ಕೊಟ್ಟಿದ್ದು ಯಾರು? ಜೆಡಿಎಸ್‌ನವರು ಬೆಂಕಿ ಹಚ್ಚಿ ಎಂದು ಹೇಳಿದರಾ ಪೊಲೀಸರು ಇದ್ದಿದ್ದರೆ ಈ ಘಟನೆ ಆಗುತ್ತಿರಲಿಲ್ಲ ಎಂದು ಹೇಳಿದರು.

RELATED ARTICLES
- Advertisment -
Google search engine

Most Popular